ಹೊಸ ದಿಗಂತ ವರದಿ, ಕಲಬುರಗಿ:
ಖಾತೆ ಬದಲಾವಣೆಯಿಂದ ಉಂಟಾದ ಅಸಮಾಧಾನವನ್ನು ಸಧ್ಯದಲ್ಲೇ ಶಮನ ಮಾಡಲಾಗುವುದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಅವರು ಗುರುವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಸಮಾಧಾಗೊಂಡಿರವರೊಂದಿಗೆ ಸಿಎಂ ಯಡಿಯೂರಪ್ಪ ನವರು ಕೂಡಲೇ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಲಿದ್ದಾರೆ ಎಂದರು.
ಖಾತೆ ಹಂಚಿಕೆಯಲ್ಲಿ ನನ್ನ ಕೈವಾಡವಿದೆ ಎನ್ನುವ ಆರೋಪಗಳು ಎಲ್ಲವೂ ಶುಧ್ಧ ಸುಳ್ಳು. ಯಡಿಯೂರಪ್ಪ ನವರು ನಾಲ್ಕು ದಶಕಗಳ ಹೋರಾಟದ ಮೂಲಕ ಮುಖ್ಯಮಂತ್ರಿಯಾಗಿದ್ದಾರೆ.
ಡಿಸಿಎಂ, ಸಿಎಂ ಆಗಿ ಅಪಾರ ರಾಜಕೀಯ ಅನುಭವವಿರುವ ಅವರಿಗೆ ಯಾರ ಹಸ್ತಕ್ಷೇಪದ ಅಗತ್ಯವಿಲ್ಲ ಎಂದರು.
ಖಾತೆ ಹಂಚಿಕೆಯಲ್ಲಿ ನನ್ನ ಹಸ್ತಕ್ಷೇಪವಂತು ಇಲ್ಲವೇ ಇಲ್ಲೆಂದರು.