Tuesday, August 16, 2022

Latest Posts

ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆಗೆ ದಾಖಲಾದವರ ಸಂಪೂರ್ಣ ವೆಚ್ಚವನ್ನು ರಾಜ್ಯ ಸರಕಾರ ಭರಿಸಲಿದೆ: ಸಚಿವ ಡಾ.ಕೆ. ಸುಧಾಕರ್‌

ಬೆಂಗಳೂರು: ಸರಕಾರದ ಮೂಲಕ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ದಾಖಲಾದವರ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ.
ಕೋವಿಡ್ ಚಿಕಿತ್ಸೆ ಹೆಸರಿನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ನಿಯಮ 69ರ ಅಡಿ ಪ್ರಸ್ತಾಪಿಸಿದ ವಿಷಯಗಳಿಗೆ ಮಂಗಳವಾರ ಅವರು ಉತ್ತರ ನೀಡಿದರು.
ಚರ್ಚೆ ವೇಳೆ ಜೆಡಿಎಸ್‌ ಶಾಸಕ ಶಿವಲಿಂಗೇಗೌಡ ಅವರು, ಕೊರೋನಾ ಚಿಕಿತ್ಸೆ ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚು ಹಣ ಪಡೆಯಲಾಗುತ್ತಿದೆ ಎಂಬ ಪ್ರಶ್ನೆ ಎತ್ತಿದರು, ಇದಕ್ಕೆ ಕೂಡಲೇ ಪ್ರತಿಕ್ರಿಯಿಸಿದ ಸಚಿವರು, ಕೊರೋನಾ ಚಿಕಿತ್ಸೆಯಲ್ಲಿ ಎರಡು ವಿಧಗಳಿವೆ. ಕೋವಿಡ್‌ ದೃಢವಾದ ಕೂಡಲೇ ಬಿಬಿಎಂಪಿ ಮೂಲಕ ನೋಂದಣಿ ಮಾಡಿಕೊಂಡು ಸರಕಾರಿ ಅಥವಾ ಖಾಸಗಿ ಆಸ್ಪತ್ರೆಗೆ ದಾಖಲಾದರೆ, ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರಕಾರ ಭರಿಸಲಿದೆ. ಸರಕಾರದಲ್ಲಿ ನೋಂದಣಿ ಮಾಡಿಕೊಳ್ಳದೇ, ನೇರವಾಗಿ ಅವರೇ ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಾರೆ. ಅಂತಹವರು ಚಿಕಿತ್ಸಾ ವೆಚ್ಚವನ್ನು ಅವರೇ ಭರಿಸಬೇಕು. ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚು ಶುಲ್ಕ ವಿಧಿಸುತ್ತಿರುವುದು ಗಮನಕ್ಕೆ ಬಂದ ಕೂಡಲೇ, ಖಾಸಗಿಯವರಿಗೂ ಕೊರೋನಾ ಚಿಕಿತ್ಸಾ ವೆಚ್ಚವನ್ನು ನಿಗದಿ ಮಾಡಿದ್ದೇವೆ ಎಂದು ಉತ್ತರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss