Tuesday, July 5, 2022

Latest Posts

ಖಾಸಗಿ ಶಾಲೆಗಳ ಶಿಕ್ಷಕರಿಗೆ ರಾಜ್ಯ ಸರ್ಕಾರ RTE ಬಾಕಿ ಹಣ ನೀಡಬೇಕು: ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ

ಬೆಂಗಳೂರು: ರಾಜ್ಯ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಶಾಲೆಗಳ ಶಿಕ್ಷಕರಿಗೆ ವೇತನ ನೀಡಲು ರಾಜ್ಯ ಸರ್ಕಾರ RTE ಬಾಕಿ ಹಣವನ್ನು ನೀಡುವಂತೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ.

2 ಲಕ್ಷಕ್ಕಿಂತ ಅಧಿಕ ಭೋದಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವೇತನ ನೀಡಲು ಖಾಸಗಿ ಸಂಸ್ಥೆಗಳು ಹಣ ವಿಲ್ಲದೆ ತೊಂದರೆಯಲ್ಲಿ ಸಿಲುಕಿಕೊಂಡಿದ್ದಾರೆ. ಈ ನಡುವೆ ಕಳೆದ ವರ್ಷದ ಬಾಕಿ ಶುಲ್ಕವನ್ನು ಕಟ್ಟದೆ ಪೋಷಕರು ವಿದ್ಯಾರ್ಥಿಗಳನ್ನು ಬೇರೆಡೆ ವರ್ಗಾಯಿಸಲು ಮುಂದಾಗುತ್ತಿದ್ದಾರೆ.

ರಾಜ್ಯ ಸರ್ಕಾರದಿಂದ ಖಾಸಗಿ ಶಾಲೆಗಳಿಗೆ ಬರಬೇಕಿದ್ದ RTE ಬಾಕಿ ಶುಲ್ಕ 1200 ಕೋಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಇತರೆ ವಲಯಗಳಿಗೆ ಆರ್ಥಿಕ ಸಹಾಯ ನೀಡಿದಂತೆ ಅನುದಾನ ರಹಿತ ಖಾಸಗಿ ಶಾಲೆಗಳಿಗೂ ಆರ್ಥಿಕ ನೆರವು ನೀಡುವಂತೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss