Wednesday, August 17, 2022

Latest Posts

ಖಾಸಗಿ ಶಾಲೆಯಲ್ಲಿ ಮಕ್ಕಳನ್ನು ಓದಿಸುವ ಪೋಷಕರಿಗೆ ಸಿಹಿ ಸುದ್ದಿ: ಶಾಲಾ ಶುಲ್ಕ ಕಡಿತ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊರೋನಾ ಪರಿಸ್ಥಿತಿಯಲ್ಲಿ ಎಲ್ಲರಿಗೂ ಆರ್ಥಿಕ ಸಂಕಷ್ಟ ಎದುರಾಗಿದ್ದು, ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಶುಲ್ಕ ಕಡಿಮೆ ಮಾಡಲು ಒಪ್ಪಿಗೆ ನೀಡಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಪೋಷಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲಾ ಶುಲ್ಕ ಭರಿಸಲು ಅಸಾಧ್ಯ. ಹಾಗಾಗಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಜೊತೆ ಮಾತನಾಡಿದ್ದು, ಶುಲ್ಕ ಕಡಿಮೆ ಮಾಡಲು ಒಪ್ಪಿದ್ದಾರೆ.
ಖಾಸಗಿ ಶಾಲೆಗಳ ಸಂಘಟನೆಗಳಾದ ಕ್ಯಾಮ್ಸ್,ಕುಸ್ಮ,ಕುಪ್ಸ ಹಾಗೂ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಪೋಷಕರ ಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿ ಇದ್ದರು. ಎರಡುವರೆ ಗಂಟೆಗಳ ಚರ್ಚೆಯ ನಂತರ ನಿರ್ಧಾರ ಪ್ರಕಟವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!