Monday, August 8, 2022

Latest Posts

ಖಾಸಗಿ ಶಾಲೆ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆ ಉಳಿಸಿ: ಡಿಡಿಪಿಐ ರಘುನಂದನ್

ಮಂಡ್ಯ: ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕಾ ಗುಣಮಟ್ಟ ಹೆಚ್ಚಳಕ್ಕಾಗಿ ವಿದ್ಯಾಗಮ ಕಾರ್ಯಕ್ರಮ ಮೂಲಕ ಶಿಕ್ಷಣ ನೀಡಲಾಗುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಘುನಂದನ್ ಹೇಳಿದರು.
ತಾಲೂಕಿನ ಬೇವಿನಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಮಾನವ ಹಕ್ಕುಗಳ ಸಮಿತಿ ಆಯೋಜಿಸಿದ್ದ ಸರ್ಕಾರಿ ಶಾಲೆ ಉಳಿಸಿ-ಖಾಸಗಿ ಶಾಲೆ ವ್ಯಾಮೋಹ ಅಳಿಸಿ ಘೋಷವಾಕ್ಯದೊಂದಿಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಪೋಷಕರಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ 2020-21ನೇ ಶೈಕ್ಷಣಿಕ ಸಾಲಿನ ತರಗತಿಗಳು ಆರಂಭವಾಗಿಲ್ಲ. ಮಕ್ಕಳಿಗೆ ನಿರಂತರ ಕಲಿಕೆಯೂ ಲಭ್ಯವಾಗುತ್ತಿಲ್ಲ. ಶಾಲೆಗಳು ಆರಂಭವಾಗುವವರೆಗೂ ಮಕ್ಕಳನ್ನು ನಿರಂತರ ಕಲಿಕೆಗೆ ಹಚ್ಚುವ ಸಲುವಾಗಿ ಶಿಕ್ಷಣ ಇಲಾಖೆ ಪರ್ಯಾಯ ಮಾರ್ಗವಾಗಿ ವಿದ್ಯಾಗಮ ಕಾರ್ಯಕ್ರಮ ಜಾರಿಗೆ ತಂದಿದೆ. ಜಿಲ್ಲೆಯಲ್ಲಿಯೂ ಈ ಕಾರ್ಯಕ್ರಮ ಜಾರಿಯಾಗಿದ್ದು, ಪೋಷಕರು ಮತ್ತು ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದರು.
ಕಾನೂನು ಅರಿವು ವಿದ್ಯಾರ್ಥಿಗಳಿಗೆ ಅಲ್ಲದೆ ಎಲ್ಲಾ ಪೋಷಕರಿಗೆ ಮತ್ತು ನಾಗರೀಕರಿಗೂ ಅತ್ಯಗತ್ಯವಿದೆ, ಸಂಘಸಂಸ್ಥೆಗಳು ಕಾನೂನು ಅರಿವು ಕಾರ್ಯಕ್ರಮ ಮಾಡುತ್ತಿರುವುದು ಉಪಯುಕ್ತವಾಗಿದೆ. ಎಲ್ಲರೂ ಕಾನೂನು ನಿಯಮಗಳನ್ನು ಪಾಲಿಸೋಣ ಎಂದರು.
ಖಾಸಗಿ ಶಾಲೆಗಳಲ್ಲಿ ಸಿಗುವ ಇಂಗ್ಲೀಸ್ ಮಾಧ್ಯಮಾ ಕಲಿಕಾ ಕೌಶಲ್ಯವನ್ನು ಸರ್ಕಾರಿ ಶಾಲೆಗಳಲ್ಲೂ ಆರಂಭಿಸಲಾಗಿದೆ, ಪೋಷಕರು ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ, ಸಾಧನೆ ಮಡಿದವರೆಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಲಿತವರೇ ಆಗಿದ್ದಾರೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss