ಚೆನ್ನೈ: ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ವುಡ್ನ ಹಿರಿಯ ನಿರ್ದೇಶಕ ವಿಜಯ ರೆಡ್ಡಿ (84) ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
೭0ರ ದಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ಡೈರೆಕ್ಟರ್ ಎನಿಸಿಕೊಂಡಿದ್ದ ವಿಜಯ ರೆಡ್ಡಿ. ಕನ್ನಡದಲ್ಲಿ ಸುಮಾರು 40 ಕ್ಕೂ ಹೆಚ್ಚು ಸಿನಿಮಾಗಳಿಗೆ ಌಕ್ಷನ್ ಕಟ್ ಹೇಳಿದ್ದರು. ಇವರ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಬಹುತೇಕ ಸಿನಿಮಾಗಳು ಸೂಪರ್ ಹಿಟ್ ಆಗಿವೆ.
1970ರಲ್ಲಿ ತೆರೆಕಂಡ ರಂಗಮಹಲ್ ರಹಸ್ಯ ವಿಜಯ್ ರೆಡ್ಡಿ ನಿರ್ದೇಶನದ ಮೊದಲ ಚಿತ್ರ. ನಂತರ ಡಾ. ರಾಜಕುಮಾರ್ ನಟನೆಯ ಗಂಧದ ಗುಡಿ, ಮಯೂರ, ಶ್ರೀನಿವಾಸ ಕಲ್ಯಾಣ, ಬಡವರ ಬಂಧು, ಸನಾದಿ ಅಪ್ಪಣ್ಣ, ನೀ ನನ್ನ ಗೆಲ್ಲಲಾರೆ, ಭಕ್ತ ಪ್ರಹ್ಲಾದ, ಹುಲಿಯ ಹಾಲಿನ ಮೇವು ಸೇರಿದಂತೆ ಹಲವು ಸಿನಿಮಾಗಳನ್ನು ವಿಜಯ ರೆಡ್ಡಿ ನಿರ್ದೇಶನ ನೀಡಿದ್ದರು.