Tuesday, July 5, 2022

Latest Posts

ವಿದ್ವಾಂಸ ಗಣೇಶ ಕೊಲೆಕಾಡಿಯವರಿಗೆ ತಲ್ಲೂರು ಕನಕ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಉಡುಪಿ ಯಕ್ಷಗಾನ ಕಲಾರಂಗ ಯಕ್ಷ ವಿದ್ವಾಂಸರಿಗೆ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಛಾಂದಸ, ಪ್ರಸಂಗ ಕರ್ತ, ಕಲಾವಿದ ಶ್ರೀ ಗಣೇಶ ಕೊಲೆಕಾಡಿ ಆಯ್ಕೆಯಾಗಿದ್ದಾರೆ.

ತಲ್ಲೂರು ಕನಕ-ಅಣ್ಣಯ್ಯ ಶೆಟ್ಟಿ ಸ್ಮರಣೆಯಲ್ಲಿ ನೀಡುವ ಪ್ರಶಸ್ತಿಗೆ ಕಲಾವಿದ ಶ್ರೀ ಗಣೇಶ ಕೊಲೆಕಾಡಿ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ 25, ಶುಕ್ರವಾರ ಸಂಜೆ 5.00 ಗಂಟೆಗೆ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ. ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹಿಸಲಿದ್ದಾರೆ. ಪ್ರಶಸ್ತಿಯು ರೂಪಾಯಿ 40,000 ನಗದು ಪುರಸ್ಕಾರ ಸಹಿತ ಪ್ರಶಸ್ತಿ ಪರಿಕರಗಳನ್ನೊಳಗೊಂಡಿರುತ್ತದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss