Wednesday, August 10, 2022

Latest Posts

ಗಣೇಶ ಹಬ್ಬ: ಬಿಬಿಎಂಸಿ ಹೊರಡಿಸಿರುವ ನಿಯಮ ವಿರೋಧಿಸಿ ಹಿಂದೂ ಸಂಘಟನೆ ಮುಖಂಡರ ಪ್ರತಿಭಟನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ಮಂಡ್ಯ:

ಬೆಂಗಳೂರಿನಲ್ಲಿ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಹೊರಡಿಸಿರುವ ನಿಯಮಗಳನ್ನು ವಿರೋಧಿಸಿ ಗುರುವಾರ ನಗರದಲ್ಲಿ ಹಿಂದು ಸಂಘಟನೆ ಮುಖಂಡರು ಪ್ರತಿಭಟನೆ ನಡೆಸಿದರು.
ಹೊಸಹಳ್ಳಿ ವೃತ್ತದಲ್ಲಿ ತಲೆ ಮೇಲೆ ಗಣಪತಿ ಮೂರ್ತಿಗಳನ್ನು ಹೊತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ನಿಯಮಗಳನ್ನು ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿದರು.
ಬಿಬಿಎಂಸಿ ವಿಧಿಸಿರುವ ನಿಯಮಗಳು ಹಿಂದುಗಳ ವಿರುದ್ಧವಾಗಿದೆ. ಇದನ್ನು ವಿರೋಧಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಹಿಂದು ಸಂಘಟನೆಗಳ ಪ್ರತಿಭಟನೆ ಬೆಂಬಲಿಸಲಾಗುತ್ತಿದೆ. ಕರೊನಾ ಹರಡದಂತೆ ರಾಜ್ಯ ಸರ್ಕಾರ ವಿಧಿಸಿರುವ ನಿಯಮಗಳನ್ನು ಮೀರುವುದಿಲ್ಲ. ಆದರೆ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯದಂತೆ ಆಚರಣೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಿದ್ದರಾಜುಗೌಡ, ಹೊಸಹಳ್ಳಿ ಶಿವು, ನಾಗಣ್ಣ ಮಲ್ಲಪ್ಪ, ಎಚ್.ಕೆ.ಮಂಜುನಾಥ್, ಸಿದ್ದಲಿಂಗು ಇತರರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss