Thursday, June 30, 2022

Latest Posts

ಗದಗ ಜಿಲ್ಲೆಯಲ್ಲಿ ಇಬ್ಬರಿಗೆ ಕೊರೋನಾ ಪಾಸಿಟಿವ್ ದೃಢ: ಸೋಂಕಿತರ ಸಂಖ್ಯೆ 180ಕ್ಕೆ ಏರಿಕೆ

ಗದಗ: ಜಿಲ್ಲೆಯಲ್ಲಿ ಗುರುವಾರ ದಿ.02ರಂದು ಇಬ್ಬರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಒಟ್ಟು 180 ಸೋಂಕು ದೃಢಪಟ್ಟಿವೆ. ಅವುಗಳಲ್ಲಿ 4 ವ್ಯಕ್ತಿಗಳು ಮೃತಪಟ್ಟಿದ್ದು, 69 ಜನ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 107 ಕೊವಿಡ್-19 ಸೋಂಕಿನ ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು ತಿಳಿಸಿದ್ದಾರೆ.
ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಜೂನ್ 27 ರಂದು ಪ್ರಯಾಣಿಸಿ ಜಿಲ್ಲೆಗೆ ಆಗಮಿಸಿದ್ದ ನಗರದ ವೀರನಾರಾಯಣ ದೇವಸ್ಥಾನ ಹತ್ತಿರದ ನಿವಾಸಿ 33 ವರ್ಷದ (ಪಿ-16612) ಹಾಗೂ ಮಧ್ಯಪ್ರದೇಶ ರಾಜ್ಯದಿಂದ ಜೂನ್ 25 ರಂದು ಜಿಲ್ಲೆಗೆ ಆಗಮಿಸಿದ್ದ ಗದಗ ತಾಲ್ಲೂಕಿನ ಹೊಂಬಳ ಗ್ರಾಮದ ಕಲ್ಮೇಶ್ವರ ನಗರದ ನಿವಾಸಿ 28 ವರ್ಷದ (ಪಿ-16613) ಇವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಸೋಂಕಿತರ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕಿತರ ಪತ್ಯೆ ಕಾರ್ಯ ನಡೆಯುತ್ತಿದೆ. ಸೋಂಕಿತರಿಗೆ ಗದಗ ನಿಗದಿತ ಜಿಮ್ಸ್ಸ್ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss