Sunday, August 14, 2022

Latest Posts

ಗಲಭೆಯಲ್ಲಿ ಭಾಗಿಯಾಗಿರುವ ಆರೋಪಿಗಳ ಮೇಲೆ ಗೂಂಡಾ ಕಾಯ್ದೆಯಡಿ ಕೇಸ್ : ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು: ಕಳೆದ ರಾತ್ರಿ ನಗರದ ಡಿಜಿ ಹಳ್ಳಿ ಹಾಗೂ ಕೆ ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೋಮು ಗಲಭೆಯಲ್ಲಿ ಭಾಗಿಯಾಗಿರುವ ಆರೋಪಿಗಳ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌.
ಕಾವಲ್ ಬೈರಸಂದ್ರದಲ್ಲಿರುವ ಶಾಸಕ ಶ್ರೀನಿವಾಸ ಮೂರ್ತಿ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ರಾತ್ರಿ ಯಾರೆಲ್ಲಾ ಗಲಭೆಯಲ್ಲಿ ಭಾಗಿಯಾಗಿದ್ದರು ಎಂಬುದರ ಬಗ್ಗೆ ಖಚಿತ ಮಾಹಿತಿ ಸಿಕ್ಕಿದೆ. ಈಗಾಗಲೇ 145 ಜನರನ್ನು ಬಂಧಿಸಲಾಗಿದೆ ಎಂದರು.
ಕಾವಲ್ ಬೈರಸಂದ್ರದ ಪರಿಸ್ಥಿತಿ ನೋಡಿದರೆ ತುಂಬಾ ನೋವಾಗುತ್ತೆ. ಇದು ನಿಯೋಜಿತ ಘಟನೆ ರೀತಿ ತೋರುತ್ತಿದೆ. ಎಸ್​ಡಿಪಿಐನ್ನು ಏಕಾಏಕಿ ರದ್ದು ‌ಮಾಡೋಕೆ ಆಗಲ್ಲ, ಅದಕ್ಕೆ ಎಂದು ಒಂದು ಪ್ರಕ್ರಿಯೆ ಇದೆ. ಆ ಪ್ರಕಾರ ಸಂಘಟನೆಯನ್ನು ನಿಷೇಧ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು. ಘಟನೆಯಲ್ಲಿ ಯಾರೇ ಭಾಗಿಯಾಗಿದ್ರು, ಕಠಿಣ ಕ್ರಮ ಕೈಗೊಳ್ತೀವಿ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss