Sunday, August 14, 2022

Latest Posts

ಗಲಭೆ ಪ್ರಕರಣ: ಕಾನೂನು ಕೈಗೆತ್ತಿಕೊಂಡವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಬಾರದು: ಎಚ್‌ಡಿಕೆ ಟ್ವೀಟ್

ಬೆಂಗಳೂರು:ಬೆಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣ ಅಕ್ಷಮ್ಯ. ಕಾನೂನು ಕೈಗೆತ್ತಿಕೊಂಡವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಬಾರದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಘಟನೆ ಒಪ್ಪಲು ಸಾಧ್ಯವಿಲ್ಲ. ತಪ್ಪು ಮಾಡಿದವರೆ ಯಾರೇ ಆಗಿರಲಿ, ಧರ್ಮದ ಹೆಸರಿನಲ್ಲಿ ಗೂಂಡಾಗಿರಿ ಮಾಡುವವರನ್ನು ಮುಲಾಜಿಲ್ಲದೆ ಮಟ್ಟ ಹಾಕಬೇಕು. ರಾಜ್ಯದಲ್ಲಿ ಶಾಂತಿ ಕಾಪಾಡಬೇಕು ಎಂದು ಹೇಳಿದ್ದಾರೆ.
ಈ ಘಟನೆ ಪೂರ್ವನಿಯೋಜಿತ ಸಂಚು ಎಂಬ ಅನುಮಾನಕ್ಕೂ ಪುಷ್ಠಿ ನೀಡಿದೆ. ಸ್ಥಳೀಯ ಜನಪ್ರತಿನಿಧಿಗಳ ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದ್ದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು ಸೆಡವು ಸ್ಫೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ. ಕೌಟುಂಬಿಕ ದ್ವೇಷಾಸೂಯೆಹಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss