ಲಡಾಕ್: ಪೂರ್ವ ಲಡಾಖ್ನ ಗಲ್ವಾನ್ ಪ್ರಾಂತ್ಯದಲ್ಲಿ ಸೋಮವಾರ ರಾತ್ರಿ ನಡೆದ ಸಂಘರ್ಷದಲ್ಲಿ ಭಾರತದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಭಾರತದ ಸೇನೆ ವಿರುದ್ಧ ಚೀನಾ ಗುಂಡಿನ ದಾಳಿ ನಡೆಸಿದ್ದು ,ಈ ವೇಳೆ ಭಾರತೀಯ ಸೇನೆಯ ಓರ್ವ ಅಧಿಕಾರಿ ಹಾಗೂ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ ಎಂದು ಸೇನಾಪಡೆ ಮೂಲಗಳು ತಿಳಿಸಿವೆ.
ಕಳೆದ ರಾತ್ರಿ ಭಾರತ ಗಡಿ ಭಾಗದ ಒಳಗೆ ಚೀನಾ ಸೈನಿಕರು ಅತಿಕ್ರಮ ಪ್ರವೇಶ ಮಾಡಿದ್ದರು. ಭಾರತೀಯ ಯೋಧರು ಚೀನಾ ಸೈನಿಕರನ್ನು ನಿಯಂತ್ರಿಸಲು ಮುಂದಾಗಿದ್ದರು. ಈ ಸಂದರ್ಭ ನೂಕಾಟ, ತಳ್ಳಾಟ ನಡೆದಿತ್ತು. ಚೀನಾ ಸೈನಿಕರು ಉದ್ದಟತ ತೋರಿದ್ದರ ಪರಿಣಾಮ ಉಭಯ ಸೈನಿಕರ ನಡುವೆ ಸಂಘರ್ಷ ಶುರುವಾಗಿತ್ತು.
೪೫ ವರ್ಷಗಳ ಬಳಿಕ ಭಾರತ-ಚೀನಾ ನಡುವೆ ನಡೆದ ಗುಂಡಿನ ಚಕಮಕಿಯಿಂದ ಪೂರ್ವ ಲಡಾಖ್ನ ಗಡಿ ಪ್ರದೇಶದಲ್ಲಿ ಕದನ ಕಾರ್ಮೋಡಗಳು ದಟ್ಟವಾಗುತ್ತಿವೆ.