ಹೊಸದಿಗಂತ ವರದಿ, ಶಿವಮೊಗ್ಗ:
ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಿಶೆಟ್ಟಿ ಕೆರೆಯ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ 700 ಗ್ರಾಂ ತೂಕದ ಗಾಂಜಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ ನಗರ ನಿವಾಸಿ ತಾಸೀರ್ (27) ಬಂಧಿತ ಆರೋಪಿ.
ಆರೋಪಿಯು ತುಂಗಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೊಲೆ ಯತ್ನ ಪ್ರಕರಣ ಹಾಗೂ ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ತಲೆ ಮರೆಸಿಕೊಂಡಿದ್ದ. ನ್ಯಾಯಾಲಯವು ಈತನ ವಿರುದ್ಧ ದಸ್ತಗಿರಿ ವಾರೆಂಟ್ ಹೊರಡಿಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.