ಹೊಸ ದಿಗಂತ ವರದಿ, ಶಿವಮೊಗ್ಗ:
ನಗರದ ಪ್ರಮುಖ ವ್ಯಾಪಾರ ಕೇಂದ್ರ ಗಾಂಧಿ ಬಜಾರ್ ಅಂಗಡಿಯೊಂದರ ಮೇಲೆ ಮಹಾನಗರ ಪಾಲಿಕೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ಅಂಗಡಿಯಲ್ಲಿ ದಾಸ್ತಾನು ಮಾಡಲಾಗಿದ್ದ 1 ಟನ್ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದೆ.
ಅಂಗಡಿಯ ಹೊರಗೆ ಟ್ರೇಡರ್ಸ್ ಎಂದು ಬೋರ್ಡ್ ಹಾಕಿಕೊಂಡು ಒಳಗೆ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.
ಇದರ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿದಾಗ ಪ್ಲಾಸ್ಟಿಕ್ ಕಪ್, ಪ್ಲೇಟ್ಸ್, ಕ್ಯಾರಿಬ್ಯಾಗ್ ಸೇರಿದಂತೆ ವಿವಿಧ ಬಗೆಯ ಉತ್ಪನ್ನಗಳು ದೊರೆತಿವೆ.
ಕೋವಿಡ್ಗಿಂತ ಮೊದಲು ನಗರದ ವಿವಿಧೆಡೆ ಪ್ಲಾಸ್ಟಿಕ್ ಬಳಕೆಯ ಮೇಲೆ ಸಂಪೂರ್ಣ ನಿರ್ಬಂಧ ಹೇರಿ ಹಲವೆಡೆ ದಾಳಿ ಮಾಡಲಾಗಿತ್ತು. ಕೊರೊನಾ ನಂತರ ಪರಿಸ್ಥಿತಿ ಯಥಾಸ್ಥಿತಿಗೆ ತಲುಪಿದೆ. ಕೊನೆಗೂ ಎಚ್ಚೆತ್ತ ಮಹಾನಗರ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದರೆ ಸಂಗ್ರಾಹಕನಿಗೆ ಯಾವುದೇ ದಂಡ ವಿಧಿಸದೇ ಅಚ್ಚರಿ ಮೂಡಿಸಿದ್ದಾರೆ !