ಬೆಂಗಳೂರು: ಇಂದು ರಾಷ್ಟ್ರಪಿತ ಗಾಂಧಿ ಜಯಂತಿಯಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮೂಲಕ ಗಾಂಧೀಜಿ ಅವರ ಕನಸು ನನಸು ಮಾಡುವ ಸಂಕಲ್ಪ ತೊಡೋಣ ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ್ದು, ಸತ್ಯ ಅಹಿಂಸೆಗಳ ನಂದಾದೀಪದ ಬೆಳಕಿನಲ್ಲಿ ಸತ್ಯಾಗ್ರಹದ ದಾರಿಯಲ್ಲಿ ನಡೆದು, ಭಾರತಕ್ಕೆ ಸ್ವಾತಂತ್ರವನ್ನು ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಜಯಂತಿಯಂದು ಅವರಿಗೆ ನಮ್ಮ ಅನಂತ ಪ್ರಣಾಮಗಳನ್ನು ಸಲ್ಲಿಸೋಣ. ಸ್ವಚ್ಛತೆ, ಸ್ವಾವಲಂಬಿತ್ವಗಳ ಪ್ರತಿಪಾದಕರಾಗಿದ್ದ ಗಾಂಧೀಜಿಯವರ ಕನಸನ್ನು ನನಸು ಮಾಡುವ ಸಂಕಲ್ಪ ತೊಡೋಣ ಎಂದು ಟ್ವೀಟ್ ಮಾಡಿದ್ದಾರೆ.