ನವದೆಹಲಿ: ಜನಪ್ರಿಯ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಕೊರೋನಾದಿಂದ ಮುಕ್ತರಾಗಿದ್ದಾರೆ.
ಸತತ 19 ದಿನಗಳಿಂದ ಚಿಕಿತ್ಸೆ ನಡೆಯುತ್ತಿದ್ದು,ಇದೀಗ ಪರೀಕ್ಷೆಯಲ್ಲಿ ಕೊರೋನಾ ನೆಗೆಟಿವ್ ಬಂದಿದೆ. ಇನ್ನೂ ಒಂದು ವಾರ ವೆಂಟಿಲೇಟರ್ನಲ್ಲಿಯೇ ಚಿಕಿತ್ಸೆ ಮುಂದುವರಿಯಲಿದ್ದು, ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.
ಎಸ್ಪಿಬಿ ಅವರ ಪುತ್ರ ಎಸ್.ಪಿ. ಚರಣ್ ತಂದೆ ಇನ್ನೂ ಐಸಿಯುನಲ್ಲಿಯೇ ಇದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು,ಶೀಘ್ರ ಚೇತರಿಕೆ ಕಾಣಲಿದ್ದಾರೆ ಎಂದಿದ್ದಾರೆ.