Wednesday, August 17, 2022

Latest Posts

ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥಿರ: ಪುತ್ರ ಚರಣ್ ಮಾಹಿತಿ

ಬೆಂಗಳೂರು : ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಎಸ್ ಪಿ ಬಿ ಅವರ ಪುತ್ರ ಚರಣ್ ಸ್ಪಷ್ಟಪಡಿಸಿದ್ದಾರೆ.
ಎಸ್ ಪಿ ಬಿ ಅವರ ಆರೋಗ್ಯ ಸ್ಥಿರವಾಗಿದ್ದು, ಅವರಿಗೆ ಒಂದು ಬಾರಿ ಫಿಸಿಯೋಥೆರಪಿ ಮಾಡಲಾಗಿದೆ ಎಂದು ಎಸ್ ಬಿ ಅವರ ಪುತ್ರ ಚರಣ್ ಹೇಳಿದ್ದಾರೆ. ಇಂದು ನಾನು ಆಸ್ಪತ್ರೆಗೆ ಭೇಟಿ ನೀಡಿಲ್ಲ, ಆದರೆ ಚೆನ್ನೈನ ಎಂಜಿಎಂ ಹೆಲ್ತ್ ಕೇರ್ ನ ವೈದ್ಯರು ಅಪ್ಪನ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ, ವೈದ್ಯರಿಗೆ ಅಭಿನಂದನೆಗಳು ಎಂದಿದ್ದಾರೆ. ಎಸ್ ಪಿ ಬಾಲಸುಬ್ರಮಣ್ಯಂಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ನುರಿತ ತಜ್ಞರ ತಂಡ ಎಸ್ ಪಿ ಬಿ ಅವರ ಮೇಲೆ ತೀವ್ರ ನಿಗಾ ವಹಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!