Wednesday, August 10, 2022

Latest Posts

ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ನಾರ್ಮಲ್: ಮಾಹಿತಿ ನೀಡಿದ ಪುತ್ರ ಚರಣ್!

ಚೆನ್ನೈ: ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು, ಸ್ವಲ್ಪ ಮಟ್ಟಿಗೆ ಕುಳಿತುಕೊಳ್ಳುವುದು ಹಾಗೂ ಸ್ವಲ್ಪ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ಅವರ ಪುತ್ರ ಚರಣ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ಅವರು ಮಾಹಿತಿ ನೀಡಿದ್ದು, ಆಪ್ಪನ ಆರೋಗ್ಯ ಸ್ಥಿರವಾಗಿದೆ. ಅವರು ವೆಂಟಿಲೇಟರ್‍ನಲ್ಲೇ ಇದ್ದಾರೆ. ಉಳಿದೆಲ್ಲ ವರದಿಗಳು ನಾರ್ಮಲ್ ಆಗಿದ್ದು, ಯಾವುದೇ ಇನ್ಫೆಕ್ಷನ್ ಕಂಡು ಬಂದಿಲ್ಲ. ಇದೀಗ ಅವರು ಕುಳಿತುಕೊಳ್ಳುತ್ತಿದ್ದು, ವೈದ್ಯರ ಸಹಾಯದ ಮೇರೆಗೆ ಪ್ರತಿ ದಿನ 20 ನಿಮಿಷಗಳ ಕಾಲ ಕುಳಿತುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss