Friday, August 12, 2022

Latest Posts

ಗುಂಡಿಕ್ಕಿ ಹುಲಿಯನ್ನು ಕೊಂದು ನಾಲ್ಕು ಕಾಲುಗಳನ್ನು ಕತ್ತರಿಸಿಕೊಂಡು ಹೋದ ಕಿರಾತಕರು

ಮೈಸೂರು: ಬಂದೂಕಿನಿಂದ ಹುಲಿಯೊಂದನ್ನು ಕೊಂದ ಹಾಕಿದರ ದುಷ್ಕರ್ಮಿಗಳು ಅದರ ಉಗುರಿಗಾಗಿ ನಾಲ್ಕು ಕಾಲುಗಳನ್ನು ಕತ್ತರಿಸಿಕೊಂಡು ಹೋಗಿರುವ ಘಟನೆ ಮೈಸೂರು ಜಿಲ್ಲೆಯ ನಾಗರಹೊಳೆರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕಲ್ಲಹಳ್ಳ ಅರಣ್ಯ ವಲಯದಲ್ಲಿ ನಡೆದಿದೆ.

ಕಲ್ಲಹಳ್ಳ ವಲಯದ ಕಾರ್ಮಾಡು ಗೇಟ್ ಹಾಗೂ ತಟ್ಟೆಕೆರೆ ಹಾಡಿಯ ಮಧ್ಯೆ ಅರಣ್ಯ ಪ್ರದೇಶದಲ್ಲಿ ಸುಮಾರು ೬ ವರ್ಷದ ಗಂಡು ಹುಲಿಯ ಕಳೇಬರ ಪತ್ತೆಯಾಗಿದೆ. ಆ ಹುಲಿಯನ್ನು ಗುಂಡು ಹಾರಿಸಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ಬಂದೂಕಿನ ಗುಂಡು ಸ್ಥಳದಲ್ಲಿ ಸಿಕ್ಕಿದೆ. ಕಿರಾತಕರು ಹುಲಿಯನ್ನು ಕೊಂದು ಉಗುರಿಗಾಗಿ ನಾಲ್ಕು ಕಾಲುಗಳನ್ನು ಕತ್ತರಿಸಿದ್ದಾರೆ. ಅಲ್ಲದೆ ಕೋರೆ ಹಲ್ಲುಗಳನ್ನು ಕೀಳಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಗಸ್ತಿನಲ್ಲಿದ್ದ ಸಿಬ್ಬಂದಿಯಿoದ ವಿಷಯ ತಿಳಿದು ಸ್ಥಳಕ್ಕೆ ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಜಯ್ ಮಿಶ್ರ, ಟೈಗರ್ ಪ್ರಾಜೆಕ್ಟ್ನ ಜಗತ್ ರಾಂ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್, ನಾಗರಹೊಳೆ ನಿರ್ದೇಶಕ ಡಿ.ಮಹೇಶ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss