ರಾಜಕೋಟ್: ಇಲ್ಲಿನ ಕಚ್ ಜಿಲ್ಲೆಯ ಬಚಾವು ಪ್ರದೇಶದ ಬಳಿ ಭಾನುವಾರ ರಾತ್ರಿ ಭೂಮಿ ನಡುಗಿದ್ದು, ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದೆ.
ರಾಜಕೋಟ್ನಿಂದ ವಾಯುವ್ಯದ ಉತ್ತರ ದಿಕ್ಕಿನ 122 ಕಿಮೀ ಅಂತರದಲ್ಲಿ ಕಂಪನ ಕೇಂದ್ರ ಬಿಂದು ದಾಖಲಾಗಿದೆ. ಘಟನೆಯಿಂದ ಈವರೆಗೂ ಯಾವುದೇ ಸಾವು ನೋವು ಸಂಭವಿಸಿದ ಕುರಿತು ವರದಿಯಾಗಿಲ್ಲ.
ಈ ಬಗ್ಗೆ ಟ್ವೀಟ್ ಮಾಡಿರುವ ಗುಜರಾತ್ ಸರಕಾರ, ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಕೂಡಲೇ ರಾಜಕೋಟ್, ಕಚ್ ಮತ್ತು ಪಠಾಣ್ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಪರಿಸ್ಥಿತಿಯ ಬಗ್ಗೆ ವರದಿ ಪಡೆದುಕೊಂಡಿದ್ದಾರೆ ಎಂದು ಹೇಳಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.