Monday, July 4, 2022

Latest Posts

ಗುಜರಾತ್ ಶಾಸಕ ಇಮ್ರಾನ್ ಖೇದವಾಲ ಗೆ ಕೊರೋನಾ ಸೋಂಕು ದೃಢ

ಅಹಮದಾಬಾದ್: ಗುಜರಾತ್ ನ ಮುಖ್ಯಮಂತ್ರಿ ವಿಜಯ್ ರೂಪಾನಿ ಜೊತೆ ಸಭೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಶಾಸಕ ಇಮ್ರಾನ್ ಖೇದವಾಲ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮಂಗಳವಾರ ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ಗೃಹ ಕಚೇರಿಯಲ್ಲಿ ಸಭೆ ಕರೆದಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಇಮ್ರಾನ್ ಖೇದವಾಲ ಕೂಡ ಆಗಿಯಾಗಿದ್ದರು. ಸುದ್ದಿಗೋಷ್ಠಿಯಲ್ಲಿ ರಾಜ್ಯದ ಆರೋಗ್ಯಾಧಿಕಾರಿಗಳು, ರಾಜ್ಯದ ಶಾಸಕು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಂಜೆ ಇಮ್ರಾನ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಖಚಿತವಾಗಿದೆ. ಅವರನ್ನು ತಕ್ಷಣ ಎಸ್.ವಿ.ಪಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss