spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, September 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಗುಡ್ ನ್ಯೂಸ್| ರಾಜ್ಯದಲ್ಲಿ ಭರದಿಂದ ಸಾಗಿದೆ ಕೊರೋನಾ ಲಸಿಕೆ ವಿತರಣೆ ಸಿದ್ಧತೆ: ಎಷ್ಟು ಸ್ಥಳದಲ್ಲಿ ಲಸಿಕೆ ಲಭ್ಯವಿದೆ ಗೊತ್ತಾ?

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮಹಾಮಾರಿ ಕೊರೋನಾ ಸೋಂಕಿಗೆ ಲಸಿಕೆ ಲಭ್ಯವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾತನಾಡಿ ಕೆ. ಸುಧಾಕರ್ ಕೋವಿಡ್ ಲಸಿಕೆಯ ವಿತರಣೆಗೆ ಸಕಲ ಸಿದ್ಧತೆಗಳು ನಡೆದಿದೆ. ಲಸಿಕೆ ಸಂಗ್ರಹ ಹಾಗೂ ವಿತರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದಲ್ಲಿ  29,451 ಕಡೆ ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದ್ದು,  ಲಸಿಕೆ ವಿತರಣೆ ಮಾಡಲು 10,008 ವ್ಯಾಕ್ಸಿನೇಟರ್ ಸಿಬ್ಬಂದಿಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಲಸಿಕೆ ಸಂಗ್ರಹ ಮತ್ತು ವಿತರಣೆಗೆ 2,855 ಕೋಲ್ಡ್ ಚೇನ್ ಕೇಂದ್ರ ಲಭ್ಯವಿದ್ದು, ಶೀಘ್ರ ಲಸಿಕೆ ವಿತರಣೆ ಮಾಡಲು ಸಾಧ್ಯವಾಗುವಂತೆ ಬೆಂಗಳೂರು ನಗರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಸಂಗ್ರಹ ಕೇಂದ್ರಗಳನ್ನು ಆರಂಭಿಸಲು ಪ್ರಸ್ತಾಪಿಸಲಾಗಿದೆ ಎಂದು ಅವರು ವಿವರಿಸಿದರು.

 

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss