ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಒಂದು ವಾರಗಳ ಲಾಕ್ ಡೌನ್ ಜಾರಿಯಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಬುಧವಾರ ತನಕ ಜನರು ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶವಿದ್ದು ಜನತೆ ಅಗತ್ಯ ಸಾಮಾಗ್ರಿಗಳನ್ನು ಖರೀದಿಸಬೇಕು ಎಂದು ಸಚಿವ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.
ಲಾಕ್ ಡೌನ್ ನಿಂದಾಗಿ ಗುರುವಾರದಿಂದ ಜಿಲ್ಲೆ ಮತ್ತೆ ಸ್ತಬ್ಧವಾಗಲಿದೆ.