Wednesday, June 29, 2022

Latest Posts

ಗೂಗಲ್ ಮೀಟ್ ಮೂಲಕ ಪತ್ರಿಕಾಗೋಷ್ಠಿ ನಡೆಸಿ ಹೊಸ ಅಧ್ಯಾಯ ಬರೆದ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷರು!

ಕಾಸರಗೋಡು: ಕೋವಿಡ್ ಮಹಾಮಾರಿ ವಿರುದ್ಧದ ಹೋರಾಟದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಅಗತ್ಯವನ್ನು ಎತ್ತಿ ತೋರಿಸಿ ಬಿಜೆಪಿ ಜಿಲ್ಲಾ ಸಮಿತಿಯ ವತಿಯಿಂದ ಬುಧವಾರ ಹೈಟೆಕ್ ಪತ್ರಿಕಾಗೋಷ್ಠಿ ನಡೆಸಲಾಯಿತು.
ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷ , ನ್ಯಾಯವಾದಿ ಕೆ.ಶ್ರೀಕಾಂತ್ ಅವರು ಆನ್‌ಲೈನ್‌ನಲ್ಲಿ ವರ್ಚುವಲ್ ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ದರು. ಅಲ್ಲದೆ ಪಕ್ಷದ ಬಹುತೇಕ ಎಲ್ಲ ಸಭೆಗಳೂ ವಿಡಿಯೋ ಕಾನ್ಫರೆನ್ಸಿಂಗ್ ಆಗಿಯೇ ಈಗ ನಡೆಯುತ್ತಿದೆ.
ಬುಧವಾರದಂದು ತನ್ನ ಮನೆಯಲ್ಲಿ ಕುಳಿತು ಗೂಗಲ್ ಮೀಟ್ ಆ್ಯಪ್ ಮೂಲಕ ಪತ್ರಿಕಾಗೋಷ್ಠಿ ನಡೆಸಿ ಹೊಸ ಅಧ್ಯಾಯಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರು ನಾಂದಿ ಹಾಡಿದರು.
ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಕೆಲಸ ಮಾಡುವ ಹಾಗೂ ಕಚೇರಿಗಳಲ್ಲಿ ಕೆಲಸ ಮಾಡುವ ಕಾಸರಗೋಡು ಪತ್ರಕರ್ತರು ಆನ್‌ಲೈನ್ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.
ಈಗಿರುವ ಕೊರೋನಾ ಸೋಂಕು ಸಮಸ್ಯೆಯನ್ನು ಹೇಗೆ ಕ್ರಿಯಾತ್ಮಕವಾಗಿ ಎದುರಿಸುವುದು ಎಂಬ ವಿಷಯವೇ ಆನ್ ಲೈನ್ ಪತ್ರಿಕಾಗೋಷ್ಠಿಗೆ ಪ್ರೇರಣೆಯಾಗಿದೆ.
ಕೋವಿಡ್ ವಿರುದ್ಧದ ಹೋರಾಟದಲ್ಲಿ ಪತ್ರಕರ್ತರ ಸಮಯೋಚಿತವಾದ ಕೆಲಸವನ್ನು ಕೆ.ಶ್ರೀಕಾಂತ್ ಅವರು ಶ್ಲಾಘಿಸಿದರು.
ಪಕ್ಷದ ಕಾರ್ಯಕರ್ತರ ಸಭೆಗಳನ್ನು ಈಗ ಆನ್ ಲೈನ್ ಆಗಿಯೇ ಮಾಡಲಾಗುತ್ತಿದೆ. ಲಾಕ್ ಡೌನ್ ಕಾಲದಲ್ಲೂ ನಿರಾತಂಕವಾಗಿ ಜನರ ಸೇವೆ ಮಾಡಲು ಆಧುನಿಕ ತಂತ್ರಜ್ಞಾನ ಬಳಸಿ ಬಿಜೆಪಿ ತನ್ನ ಕಾರ್ಯಕ್ರಮಗಳನ್ನು ಆಯೋಜಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ , ನ್ಯಾಯವಾದಿ ಕೆ.ಶ್ರೀಕಾಂತ್ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss