spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಗೂಡ್ಸ್ ವಾಹನಗಳ ಚಾಲಕ ಮತ್ತು ಕ್ಲೀನರ್ ಗೂ ಆರೋಗ್ಯ ತಪಾಸಣೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

- Advertisement -Nitte

ಬೆಳಗಾವಿ : ರಾಜ್ಯ ಪ್ರವೇಶಿಸುವ ಗೂಡ್ಸ್ ವಾಹನಗಳ ಚಾಲಕ ಮತ್ತು ಕ್ಲೀನರ್ ಅವರ ಆರೋಗ್ಯವನ್ನು ಕೂಡ ಕಡ್ಡಾಯವಾಗಿ ತಪಾಸಣೆ ಮಾಡಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಶನಿವಾರ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಹೊರವಲಯದ ಕೊಗನೊಳ್ಳಿಯ ಅಂತರರಾಜ್ಯ ಚೆಕ್ ಪೋಸ್ಟ್ ಗೆ ಭೇಟಿ ನೀಡಿ, ಮಹಾರಾಷ್ಟ್ರ ರಾಜ್ಯದಿಂದ ಪ್ರತಿದಿನ ಆಗಮಿಸುವ ಜನರು ಹಾಗೂ ವಾಹನಗಳ ಸಂಖ್ಯೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಮಾತನಾಡಿದರು.

ಕೆಲಸದ ಅವಧಿಯನ್ನು ಎಂಟು ಗಂಟೆಗಳ ಶಿಪ್ಟ್ ಮಾಡಬೇಕು. ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಯ ಆರೋಗ್ಯವನ್ನು ಕೂಡ ತಕ್ಷಣವೇ ತಪಾಸಣೆ ನಡೆಸಬೇಕು ಎಂದು ಸಚಿವರು ಸೂಚನೆ ನೀಡಿದರು.

ತುರ್ತು ಸಂದರ್ಭದಲ್ಲಿ ರಾಜ್ಯದ ಪೊಲೀಸ್ ಅತ್ಯುತ್ತಮ ಕಾರ್ಯನಿರ್ವಹಿಸಿದೆ. ರಾಜ್ಯದಲ್ಲಿ ಎಲ್ಲ ತಬ್ಲಿಘಿಗಳು ಹಾಗೂ ಅವರ ಸಂಪರ್ಕಿತರನ್ನು ಗುರುತಿಸಿ, ಚಿಕಿತ್ಸೆ ನೀಡುವ ಕೆಲಸವನ್ನು ಯಶಸ್ವಿಯಾಗಿ ನಿಭಾಯಿಸಲಾಗಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಉತ್ತಮ ಕೆಲಸ ಆಗಿರುವುದರಿಂದ ಕೋವಿಡ್-೧೯ ಸೋಂಕು ನಿಯಂತ್ರಣ ಸಾಧ್ಯವಾಗಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಜಾಗ್ರತೆಯಿಂದ ಕೆಲಸ ಮಾಡಬೇಕು ಎಂದು ಗೃಹಸಚಿವ ಬೊಮ್ಮಾಯಿ ತಿಳಿಸಿದರು.

ಅಂತರರಾಜ್ಯ ಗಡಿಯ ಚೆಕ್ ಪೋಸ್ಟ್ ನಲ್ಲಿ ಕೆಲಸ ಮಾಡುತ್ತಿರುವವರು ಯಾವುದೇ ಒತ್ತಡ ಅಥವಾ ವಶೀಲಿಗೆ ಮಣಿಯದೇ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚೆಕ್ ಪೋಸ್ಟ್ ನ ಸಿಬ್ಬಂದಿಯ ಜತೆ ಚರ್ಚೆ ನಡೆಸಿದ ಅವರು, ಎಲ್ಲರ ಮಾದರಿ ಪರೀಕ್ಷೆ ನಡೆಸಬೇಕು.ಆರೋಗ್ಯ ಸಿಬ್ಬಂದಿಯ ಗಂಟಲು ದ್ರವ ಮಾದರಿಯನ್ನು ಪರಿಶೀಲಿಬೇಕು. ಅದೇ ರೀತಿ ಎಲ್ಲರೂ ಕಡ್ಡಾಯವಾಗಿ ಪಿಪಿಇ ಬಳಸುವಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಸೂಚನೆಯನ್ನು ನೀಡಿದ, ಸಚಿವ ಬಸವರಾಜ ಬೊಮ್ಮಾಯಿ ಉತ್ತಮ ಕಾರ್ಯನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಕಲ್ಪಿಸಲಾಗಿರುವ ಸಂಚಾರಿ ವಿಶ್ರಾಂತಿ ಗೃಹವನ್ನು ಸಚಿವರು ಪರಿಶೀಲಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss