Thursday, July 7, 2022

Latest Posts

ಗೆದ್ದ ಗ್ರಾಮ ಪಂಚಾಯತ್ ಸದಸ್ಯರಿಗೆ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮ: ಸಚಿವ ಈಶ್ವರಪ್ಪ

ಹೊಸ ದಿಗಂತ ವರದಿ ಶಿವಮೊಗ್ಗ :

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಯ ಅಂಗ ಸಂಸ್ಥೆಯಾದ ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ವತಿಯಿಂದ ಹೊಸದಾಗಿ ಆಯ್ಕೆಯಾಗಿರುವ ಗ್ರಾಪಂ ಸದಸ್ಯರಿಗೆ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮವನ್ನು ಜ.19 ರಿಂದ ಮಾರ್ಚ್ 26 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ 5762 ಗ್ರಾಪಂಗಳ 92131 ಸದಸ್ಯರಿಗೆ ತರಬೇತಿ ನೀಡಲಾಗುತ್ತದೆ. 285 ಕೇಂದ್ರಗಳಲ್ಲಿ40 ಸದಸ್ಯರಿಗೆ ಒಂದು ಬ್ಯಾಚ್ ನಂತೆ 900 ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತದೆ ಎಂದರು.

ತರಬೇತಿ ಅವಧಿಯಲ್ಲಿ ಟಿಎ, ಡಿಎ ನೀಡಲಾಗುತ್ತದೆ.15 ವಿವಿಧ ವಿಷಯಗಳಲ್ಲಿ ತರಬೆರತಿ ನೀಡಲಾಗುತ್ತದೆ. ಇದಕ್ಕೆ27.16 ಕೋಟಿ ವೆಚ್ಚವಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ 60:40ರ ಅನುಪಾತದಲ್ಲಿ ವೆಚ್ಚ ಭರಿಸುತ್ತದೆ. ರಾಜ್ಯದ ಎಲ್ಲಾ ಗ್ರಾಪಂ ಸದಸ್ಯರು ಇದರ ಪ್ರಯೋಜನ ಪಡೆದು ಗ್ರಾಮದ ಅಬನಿವೃದ್ಧಿಗೆ ಹೆಚ್ಚಿನ ಶ್ರಮ ಹಾಕುವಂತೆ ಮನವಿ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss