ಹೊಸದಿಗಂತ ಆನ್ಲೈನ್ ಡೆಸ್ಕ್:
ಬೆಂಗಳೂರಿನ ಆರ್.ಟಿ. ನಗರದ ಪೆಟ್ರೋಲ್ ಬಂಕ್ ಬಳಿ ಯುವಕನ ಕೊಲೆಯಾಗಿದೆ.
ತಡರಾತ್ರಿ ಈ ಕೃತ್ಯ ನಡೆದಿದ್ದು, ಯುವಕರ ಗುಂಪೊಂದು ವ್ಯಕ್ತಿ ಮೇಲೆ ಹಲ್ಲೆ ಮಾಡಿದೆ.
ಕಾಲ್ಸೆಂಟರ್ನಲ್ಲಿ ಉದ್ಯೋಗಿ ಲೋಕೇಶ್ ಮೃತರು. ಕೊಲೆಗೆ ಕಾರಣ ಇನ್ನು ತಿಳಿದುಬಂದಿಲ್ಲ. ದ್ವೇಷದಿಂದ ಕೊಲೆ ನಡೆದಿರಬಹುದು ಎನ್ನಲಾಗಿದೆ.
ನಿನ್ನೆ ಗೆಳೆಯರ ಜೊತೆ ಪಾರ್ಟಿ ಮಾಡಿ ತಡರಾತ್ರಿ ಮನೆಗೆ ಬರುವಾಗ ಈ ದುಷ್ಕೃತ್ಯ ನಡೆದಿದೆ. ಪೆಟ್ರೋಲ್ ಬಂಕ್ ಬಳಿ ಪೆಟ್ರೋಲ್ ಹಾಕಿಸಿ ಮುಂದೆ ಹೋಗುತ್ತಿದ್ದಂತೆ ಗುಂಪೊಂದು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದೆ. ಹಲ್ಲೆಗೊಳಗಾಗ ಲೋಕೇಶ್ ಸ್ವಲ್ಪ ದೂರ ಓಡಿ ಕುಸಿದು ಬಿದ್ದಿದ್ದಾನೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.