Sunday, August 14, 2022

Latest Posts

ಗೋಡಂಬಿ ಸಂಸ್ಕರಣಾ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ: ಭಾರೀ ನಷ್ಟ

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಕಾರ್ಯಾಚರಿಸುವ ಗೋಡಂಬಿ ಸಂಸ್ಕರಣಾ ಕಾರ್ಖಾನೆಯೊಂದರಲ್ಲಿ ಸೋಮವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿ, ಭಾರೀ ನಷ್ಟ ಉಂಟಾಗಿದೆ.
ಹಿರ್ಗಾನ ಗ್ರಾಮದಲ್ಲಿರುವ ಕಾರ್ಖಾನೆಯಲ್ಲಿ ರಾತ್ರಿ 1 ಗಂಟೆ ಸುಮಾರಿಗೆ ಬೆಂಕಿ ಅನಾಹುತ ಸಂಭವಿಸಿದೆ. ಬೆಂಕಿಯ ಕೆನ್ನಾಲಗೆಯಲ್ಲಿ ಗೋಣಿಗಳಲ್ಲಿ ತುಂಬಿಸಿಟ್ಟಿದ್ದ ಗೇರು ಬೀಜಗಳು ಸುಟ್ಟು ಕರಕಲಾಗಿವೆ. ಜೊತೆಗೆ ಎರಡು ಐಷರ್ ಲಾರಿಗಳು ಕೂಡ ಸುಟ್ಟು ಹೋಗಿವೆ. ಇದರಿಂದ ಕೋಟ್ಯಂತರ ರೂ. ನಷ್ಟ ಅಂದಾಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಉಡುಪಿ ಮತ್ತು ಕಾರ್ಕಳದ ಅಗ್ನಿ ಶಾಮಕ ವಾಹನಗಳು ಹೋಗಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ. ಇನ್ನು ಕೂಡ ಈ ಕಾರ್ಯಾಚರಣೆಯು ಪೂರ್ಣಗೊಂಡಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss