ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಷ್ಟ್ರಪಿತ ಮಹತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯನ್ನು “ದೇಶಭಕ್ತ” ಎಂದು ಕರೆಯುವ ಮೂಲಕ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತೆ ವಿವಾದ ಎಬ್ಬಿಸಿದ್ದಾರೆ.
ಗೋಡ್ಸೆ ದೇಶದ ಮೊದಲ ಭಯೋತ್ಪಾದಕ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಆರೋಪದ ಬೆನ್ನಲ್ಲೇ ಪ್ರಜ್ಞಾ ಸಿಂಗ್ ಠಾಕೂರ್ ಗೋಡ್ಸೆ ಕುರಿತಾಗಿ ಈ ರೀತಿಯಾದ ಹೇಳಿಕೆ ನೀಡಿದ್ದಾರೆ.
‘ಕಾಂಗ್ರೆಸ್ ನಿಜವಾದ ದೇಶಭಕ್ತರನ್ನು ಎಂದಿಗೂ ನಿಂದಿಸುತ್ತದೆ, ಅವರನ್ನು ‘ಕೇಸರಿ ಭಯೋತ್ಪಾದಕರು’ ಎಂದು ಕರೆಯುತ್ತದೆ. ಇದಕ್ಕಿಂತ ಕೆಟ್ಟದ್ದೇನನ್ನೂ ಹೇಳಲು ಸಾಧ್ಯವಿಲ್ಲ. ಈ ವಿಷಯದ ಬಗ್ಗೆ ಹೆಚ್ಚಿನದನ್ನು ಹೇಳಲು ನಾನು ಬಯಸುವುದಿಲ್ಲ ಎಂದು ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.
2019 ಮೇ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಜ್ಞಾ ಸಿಂಗ್ ಠಾಕೂರ್ ಗೋಡ್ಸೆರನ್ನು ದೇಶಭಕ್ತ ಎಂದು ಕರೆಯುವ ಮೂಲಕ ವಿವಾದಕ್ಕೀಡಾಗಿದ್ದರು. ನಂತರ ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚನೆ ನಡೆಸಿದ್ದರು. ಇದೀಗ ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ.