Sunday, July 3, 2022

Latest Posts

ಗೋಹತ್ಯೆ ನಿಷೇಧ , ಲವ್ ಜಿಹಾದ್ ಕಾನೂನು ಜಾರಿಗೆ ಕಾರ್ಯಕಾರಣಿ ಸಭೆಯಲ್ಲಿ ತೀರ್ಮಾನ: ಸಿಎಂ ಬಿ.ಎಸ್.ಯಡಿಯೂರಪ್ಪ

ಹೊಸ ದಿಗಂತ ವರದಿ, ಬೆಳಗಾವಿ:

ಗೋಹತ್ಯೆ ನಿಷೇಧ ಮತ್ತು ಲವ್ ಜಿಹಾದ್ ಬಗ್ಗೆ ಕಾನೂನು ಜಾರಿಗೆ ಕಾರ್ಯಕಾರಣಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ‌ಹೇಳಿದರು.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಧ್ಯವಾದರೇ ಈ ಅಧಿವೇಶನದಲ್ಲಿ ಗೋಹತ್ಯೆ ಮಸೂದೆ ಜಾರಿಗೆ ತರಬೇಕು ಎಂದು ಚರ್ಚಿಸಲಾಗಿದೆ ಎಂದರು.
ಮಸ್ಕಿ, ಬಸವಕಲ್ಯಾಣ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ದೊಡ್ಡ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದರು.
ಕಾಂಗ್ರೆಸ್ ನಷ್ಟು ಬಿಜೆಪಿಯವರು ದ್ರೋಹ ಮಾಡಿರಲಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಸಿಎಂ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿ, ಕುಮಾರಸ್ವಾಮಿಯವರು ಸತ್ಯ ಸಂಗತಿಗಳನ್ನು ಹೇಳುತ್ತಿದ್ದಾರೆ.
ಅವರದೇ ಆದ ಭಾಷೆಯಲ್ಲಿ ಹೇಳಿದ್ದಾರೆ ಎಂದರು.
ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕಾರಣಿ ಅತ್ಯಂತ ಯಶಸ್ವಿಯಾಗಿದೆ. ಎಲ್ಲ ಶಾಸಕರು ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss