Monday, July 4, 2022

Latest Posts

ಗೋ ಹಂತಕರಿಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು: ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ

ಉಡುಪಿ: ಒಂದೆಡೆ ಕೋವಿಡ್ ನಿರ್ಬಂಧದಿಂದ ಜನತೆ, ಸರ್ಕಾರಿ ವ್ಯವಸ್ಥೆಗಳು ಹೈರಾಣಾಗಿ ಹೋಗಿವೆ. ರೋಗ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಹಗಲಿರುಳೂ ಶ್ರಮಿಸುತ್ತಿದೆ. ಆದರೆ ಇದೇ ಸಮಯದಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಗೋಕಳ್ಳರು ಅವ್ಯಾಹತವಾಗಿ ಅಕ್ರಮ ಗೋಸಾಗಾಟ ಹಾಗೂ ಗೋಹತ್ಯೆ ನಡೆಸುತ್ತಿರುವುದು ಸಮಾಜದಲ್ಲಿ ಆತಂಕಕ್ಕೆ ಕಾರಣವಾಗುತ್ತಿದೆ ಎಂದು ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಕಳೆದೊಂದು ತಿಂಗಳಿನಿಂದ ಕರಾವಳಿ ಜಿಲ್ಲೆಗಳಲ್ಲಿ ರಾಜಾರೋಷವಾಗಿ ಹಳ್ಳಿಗಳಿಂದ ಹಾಗೂ ನಗರ ಭಾಗದ ಗೋಶಾಲೆಗಳಿಂದ ಗೋವುಗಳನ್ನು ಹೊತ್ತೊಯ್ಯುತ್ತಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ. ಈ ಬಗ್ಗೆ ಹಿಂದು ಸಂಘಟನೆಗಳು ಹಾಗೂ ಅನೇಕ ರೈತರು ತಮ್ಮಲ್ಲಿ ನೋವು, ದುಃಖ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಕೆಲವರು ಹೈನುಗಾರಿಕೆಯಿಂದಲೇ ಜೀವನ ನಡೆಸುತ್ತಿದ್ದಾರೆ. ಗೋಕಳ್ಳರಿಂದಾಗಿ ಅವರೆಲ್ಲ ನಿದ್ರೆಯಿಲ್ಲದ ರಾತ್ರಿಗಳನ್ನು ಕಾಣುವಂತಾಗಿದೆ. ಗೋಕಳ್ಳತನದಿಂದಾಗಿ ಮುಂದೆ ಜನರೇ ಕಾನೂನು ಕೈಗೆತ್ತಿಕೊಳ್ಳುವ ಅಪಾಯವೂ ಇದೆ.

ಆದ್ದರಿಂದ ಸರ್ಕಾರ ಜಿಲ್ಲಾಡಳಿತಗಳು, ಜನಪ್ರತಿನಿಧಿಗಳು ಅಕ್ರಮ ಗೋಸಾಗಾಟ ತಡೆಯಬೇಕು. ಅಲ್ಲಲ್ಲಿ ಕಾರ್ಯಾಚರಿಸುತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಿಸಿ, ಗೋಕಳ್ಳರು ಮತ್ತು ಹಂತಕರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss