Wednesday, July 6, 2022

Latest Posts

ಗ್ರಾಮೀಣಾಭಿವೃದ್ಧಿ ಕುರಿತು ಸರಕಾರದ ಕಾರ್ಯದರ್ಶಿಯಿಂದ ಪ್ರಗತಿ ಪರಿಶೀಲನೆ

ಹೊಸದಿಗಂತ ವರದಿ, ಕೊಡಗು:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ಅವರು
ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿದರಲ್ಲದೆ, ಹೆಚ್ಚಿನ ಪ್ರಗತಿ ಸಾಧಿಸಲು ಸಲಹೆ, ಸೂಚನೆ ನೀಡಿದರು.

ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭನ್ವರ್ ಸಿಂಗ್ ಮೀನಾ ಮತ್ತು ಅಪರ ಜಿಲ್ಲಾಧಿಕಾರಿ ರೂಪಾ ಅವರ ಉಪಸ್ಥಿತಿಯಲ್ಲಿ ಜಿಲ್ಲಾಡಳಿತ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಮುಖ್ಯವಾಗಿ ‘ಓದುವ ಬೆಳಕು’, ಡಿಜಿಟಲ್ ಗ್ರಂಥಾಲಯಗಳ ಬಗ್ಗೆ, ಶಾಲೆಯಿಂದ ಹೊರಗುಳಿದ ಮಕ್ಕಳ ಮನೆ ಮನೆ ಸಮೀಕ್ಷೆ, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಸ್ವಚ್ಛ ಭಾರತ್ ಮಿಷನ್ ಮತ್ತಿತರ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಹೆಚ್ಚಿನ ಪ್ರಗತಿ ಸಾಧಿಸಲು ಅಗತ್ಯ ಸಲಹೆ ಸೂಚನೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss