Wednesday, July 6, 2022

Latest Posts

‘ಗ್ರಾಮ ಒನ್’ ಕೇಂದ್ರಕ್ಕೆ ಚಾಲನೆ ಕೊಟ್ಟ ಸಿಎಂ: ಲಭ್ಯವಾಗಲಿದೆ 750ಕ್ಕೂ ಹೆಚ್ಚು ನಾಗರಿಕ ಸೇವೆಗಳು

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಗ್ರಾಮೀಣ ಭಾಗದಲ್ಲಿ ಸರ್ಕಾರಿ ಸೇವೆಗಳಿಗೆ ರಾಜ್ಯ ಸರಕಾರ ಡಿಜಿಟಲ್ ಸ್ಪರ್ಶ ನೀಡಿದೆ. ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಕಲ್ಪಿಸುವ ‘ಗ್ರಾಮ ಒನ್’ ಕೇಂದ್ರದ ಪ್ರಾಯೋಗಿಕ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದರು.
ಈ ಯೋಜನೆಯನ್ನು ಪ್ರಾಯೋಗಿಕವಾಗಿ ದಾವಣಗೆರೆ ಜಿಲ್ಲೆಯ 100 ಗ್ರಾಮಗಳಲ್ಲಿ ಶುರುಮಾಡಿದೆ.
ಇದರಲ್ಲಿ ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ವೃದ್ಧಾಪ್ಯ ವೇತನ&ವಿಧವಾ ವೇತನ, ಅಂಗವಿಕಲ ವೇತನ, ಸಂಧ್ಯಾ ಸುರಾ ಯೋಜನೆ, ಹಿರಿಯ ನಾಗರಿಕರ ಗುರುತಿನ ಚೀಟಿ, ಆಯುಷ್ಮಾನ್​ ಭಾರತ್​ ಆರೋಗ್ಯ ಕರ್ನಾಟಕ ಕಾರ್ಡ್​ ಸೇರಿ 750ಕ್ಕೂ ಹೆಚ್ಚು ನಾಗರಿಕ ಸೇವೆಗಳು ಲಭ್ಯವಾಗಲಿವೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ಮುಂದಿನ ದಿನಗಳಲ್ಲಿ ಮೈಕ್ರೋ-ಬ್ಯಾಂಕಿಂಗ್​ ವ್ಯವಸ್ಥೆಯೊಂದಿಗೆ ಮತ್ತಷ್ಟು ಸೇವೆಗಳನ್ನು ಗ್ರಾಮ ಒನ್​ ಕೇಂದ್ರಗಳಲ್ಲಿ ನೀಡಲು ಉದ್ದೇಶಿಸಿದೆ ಎಂದು ಸಿಎಂ ತಿಳಿಸಿದರು.
ಗ್ರಾಮೀಣ ಪ್ರದೇಶದ ಜನ ಸೇವೆ ಪಡೆಯಲು ತಾಲೂಕು ಮತ್ತು ಹೋಬಳಿ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇರುವುದಿಲ್ಲ ಎಂದು ಹೇಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss