Wednesday, January 20, 2021

Latest Posts

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಮಂಗಳಮುಖಿ ಬಿಜೆಪಿ ಸೇರ್ಪಡೆ

ಹೊಸದಿಗಂತ ವರದಿ, ಹೊಸಪೇಟೆ:

ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯತಿಯ ರಾಜಾಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಮಂಗಳಮುಖಿ ಸುಧಾ ಜೋಗತಿ ಅವರು ಶನಿವಾರ ನಡೆದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಗ್ರಾ.ಪಂ. ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ, ಅರಣ್ಯ, ಪರಿಸರ, ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರ ಸಮ್ಮುಖದಲ್ಲಿ ಮಂಗಳಮುಖಿ ಬಿಜೆಪಿ ಸೇರ್ಪಡೆಯಾದರು. ಜಿಲ್ಲಾ ಉಸ್ತುವಾರಿ ಸಚಿವ ಆನಂದ್​‌‌ ಸಿಂಗ್ ಅವರನ್ನು ಸನ್ಮಾನಿಸಿ, ಅಭಿನಂದನೆ ಸಲ್ಲಿಸಿದರು.
ಮಂಗಳಮುಖಿ ಸುಧಾ ಜೋಗತಿ ಅವರು, ಕಳೆದ ಗ್ರಾ.ಪಂ.ಚುನಾವಣೆಯಲ್ಲಿ 622 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದ್ದರು. ಗ್ರಾ.ಪಂ. ಸ್ಥಾಪನೆಯಾಗಿ 26 ವರ್ಷಗಳ ಬಳಿಕ ನಡೆದ ಚುನಾವಣೆಯಲ್ಲಿ ಇವರಿಗೆ ಗೆಲುವು ಲಭಿಸಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!