Tuesday, July 5, 2022

Latest Posts

ಗ್ರಾಮ ಪಂಚಾಯಿತಿ ಚುನಾವಣೆ: ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರಿಗೆ ಭರ್ಜರಿ ಜಯ

ಹೊಸದಿಗಂತ ವರದಿ,ಬೆಳಗಾವಿ:

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬೆಂಬಲಿಗರು ಭರ್ಜರಿ ಜಯಭೇರಿ ಭಾರಿಸಿದ್ದಾರೆ.

ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟೂ 44 ಗ್ರಾಮ ಪಂಚಾಯಿತಿಗಳಿದ್ದು, ಈವರೆಗೆ ಪ್ರಕಟವಾಗಿರುವ ಫಲಿತಾಂಶಗಳ ಪೈಕಿ ಶೇ.75ಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ತಮ್ಮ ಬೆಂಬಲಿಗರು ಜಯಗಳಿಸಿದ್ದಾಗಿ ಹೆಬ್ಬಾಳಕರ್ ಮಾಹಿತಿ ನೀಡಿದ್ದಾರೆ.

ಬಡಾಲ ಅಂಕಲಗಿಯ 13 ಸದಸ್ಯರ ಪೈಕಿ ಲಕ್ಷ್ಮಿ ಹೆಬ್ಬಾಳಕರ್ ಬೆಂಬಲಿಗರು 11 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ರಾಜೇಂದ್ರ ಅಂಕಲಗಿ ಬಣ ಕೇವಲ 2 ಸ್ಥಾನಗಳೊಂದಿಗೆ ಮುಖಭಂಗ ಅನುಭವಿಸಿದೆ. ಕುದ್ರಮನಿಯಲ್ಲಿ 10 ಸ್ಥಾನಗಳು ಲಕ್ಷ್ಮಿ ಹೆಬ್ಬಾಳಕರ್ ಬಣಕ್ಕೆ ಬಂದರೆ, 3 ಎಂಇಎಸ್ ಮತ್ತು 1 ಬಿಜೆಪಿ ಬೆಂಬಲಿಗರಿಗೆ ಬಂದಿದೆ. ಹಿರೇಬಾಗೇವಾಡಿಯ 32 ಸ್ಥಾನಗಳ ಪೈಕಿ 22ಕ್ಕೂ ಹೆಚ್ಚು ಸ್ಥಾನಗಳಲ್ಲಿ ಈಗಾಗಲೆ ಹೆಬ್ಬಾಳಕರ್ ಬೆಂಬಲಿಗರು ಗೆದ್ದಿದ್ದಾರೆ.

ಕಂಗ್ರಾಳಿ ಬಿಕೆ ಬಹು ವರ್ಷಗಳ ನಂತರ ಕಾಂಗ್ರೆಸ್ ತೆಕ್ಕೆಗೆ ಬಂದಿದೆ. ಹಿಂಡಲಗಾ, ತುರಮರಿ, ಕಮಕಾರಟ್ಟಿಗಳಲ್ಲಿ ಸಹ ಲಕ್ಷ್ಮಿ ಹೆಬ್ಬಾಳಕರ್ ಬಣ ಭರ್ಜರಿ ಗೆಲುವು ಸಾಧಿಸಿದೆ. ಮತದಾರರು ಅಭಿವೃದ್ಧಿಗೆ ಮತ ನೀಡಿರುವುದಕ್ಕೆ, ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಸದಾ ಋಣಿಯಾಗಿರುವುದಾಗಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss