ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಸ್ವರಾಜ್ಯ ಸಮಾವೇಶದ ಹಿನ್ನೆಲೆಯಲ್ಲಿ ಇಂದು ಹೊಸಕೋಟೆಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಸಂಸದ ಎಸ್. ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಂ. ಟಿ. ಬಿ. ನಾಗರಾಜ್ ಮತ್ತು ಇತರರು ಉಪಸ್ಥಿತರಿದ್ದರು.