ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಎರಡು ಹಂತದಲ್ಲಿ ನಡೆದಿದ್ದ 5,728 ಗ್ರಾಮ ಪಂಚಾಯತ್ ಚುನಾವಣೆಗಳ ಮತ ಎಣಿಕೆ ಆರಂಭವಾಗಿದ್ದು, ಇಂದು ಫಲಿತಾಂಶ ಪ್ರಕಟವಾಗಲಿದೆ. ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಶೇ. 85 ರಿಂದ 90 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ಅವರು ಕೊರೋನಾ ಸಾಂಕ್ರಾಮಿಕ ರೋಗದ ನಡುವೆ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ ಕರ್ನಾಟಕದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲಾಗಿದೆ. ಶೇ.85 ರಿಂದ 90 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ಮತ ಎಣಿಕೆ ಪ್ರಾರಂಭವಾಗಿದ್ದು, ಇವಿಎಂಗಳನ್ನು ಬಳಸಿದ ಬೀದರ್ ಜಿಲ್ಲೆಯನ್ನು ಹೊರತುಪಡಿಸಿ ಮತದಾನದಲ್ಲಿ ಮತಪತ್ರಗಳನ್ನು ಬಳಸಲಾಗಿದ್ದರಿಂದ, ಫಲಿತಾಂಶಗಳ ಪ್ರಕಟಣೆ ವಿಳಂಬವಾಗಬಹುದು ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.