Friday, August 19, 2022

Latest Posts

ಗ್ರಾ.ಪಂ. ಚುನಾವಣೆಯ ವಿಜೇತ, ಸ್ಪರ್ಧಾಳುಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷರಿಂದ ಅಭಿನಂದನೆ

ಹೊಸ ದಿಗಂತ ವರದಿ, ದಾವಣಗೆರೆ:

ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಇಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ ಹಾಗೂ ಜಯಗಳಿಸಿದವರಿಗೆ ಅಭಿನಂದನೆ ಸಲ್ಲಿಸಲು ಆಯೋಜಿಸಲಾಗಿದ್ದ ಅಭಿನಂದನಾ ಸಮಾವೇಶದಲ್ಲಿ ಭಾಗಿಯಾದರು. ಇದೇ ವೇಳೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭ  ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ. ಬಸವರಾಜ, ಶಾಸಕರಾದ ಶ್ರೀ ಎಂ.ಪಿ. ರೇಣುಕಾಚಾರ್ಯ, ಪಕ್ಷದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!