Wednesday, August 17, 2022

Latest Posts

ಗ್ರಾ.ಪಂ.ಚುನಾವಣೆ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬೇರು ಮಟ್ಟದಿಂದಲೇ ಗೆಲ್ಲಿಸಬೇಕು: ಎಸ್.ಮಹದೇವಯ್ಯ

ಮೈಸೂರು: ಬರಲಿರುವ ಗ್ರಾಮಪಂಚಾಯಿತಿ ಚುನಾವಣೆಯು ಪಕ್ಷದ ಕಾರ್ಯಕರ್ತರ ಚುನಾವಣೆಯಾಗಿರುವ ಕಾರಣ, ಬೇರು ಮಟ್ಟದಿಂದಲೇ ಪಕ್ಷದ ಕಾರ್ಯಕರ್ತರನ್ನು ಗೆಲ್ಲಿಸಬೇಕು ಎಂದು ಗ್ರಾ.ಪಂ ಚುನಾವಣೆಯ ಮೈಸೂರು ಬಿಜೆಪಿ ಜಿಲ್ಲಾ ಉಸ್ತುವಾರಿ ಎಸ್.ಮಹದೇವಯ್ಯ ತಿಳಿಸಿದರು.
ಮುಂಬರುವ ಗ್ರಾ.ಪಂ. ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಮೈಸೂರು ಜಿಲ್ಲೆಯ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ಶಂಭುದೇವನಹಳ್ಳಿಯಲ್ಲಿ ಶಕ್ತಿ ಕೇಂದ್ರ ಹಾಗೂ ಮಹಾ ಶಕ್ತಿ ಕೇಂದ್ರದ ಪ್ರಮುಖರುಗಳ ಜೊತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರನ್ನು ಬೇರುಮಟ್ಟದಿಂದಲೇ ಗೆಲ್ಲಿಸಬೇಕು. ಗ್ರಾಮ ಪಂಚಾಯಿತಿಯಲ್ಲಿ ಕಾರ್ಯಕರ್ತರು ಗೆದ್ದರೆ, ಮುಂದೆ ಬರುವ ತಾಲೂಕು, ಜಿಲ್ಲಾ ಪಂಚಾಯಿತಿಗಳಲ್ಲೂ ಪಕ್ಷ ಗೆಲುವು ಸಾಧಿಸಲು ಅನುಕೂಲವಾಗಲಿದೆ. ಹೀಗಾಗಿ ಚುನಾವಣೆ ಘೋಷಣೆಗೆ ಮುನ್ನವೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅವರ ಶ್ರಮಕ್ಕೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ತಿಳಿಸಿದರು.
ಮೈಸೂರು ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಈ ಭಾಗದಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗಬೇಕಾದಲ್ಲಿ, ಈಗ ಬರುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ನಾವು ಪ್ರತಿಷ್ಠೆಯಾಗಿ ತೆಗೆದುಕೊಂಡು ಗೆಲ್ಲಬೇಕು. ನಮ್ಮ ಎಲ್ಲ ಪ್ರಯತ್ನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಅವರು ಸಾಥ್ ಕೊಡುತ್ತಿದ್ದು, ಅವರು ಬೆಂಬಲ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಮಾಜಿ ಶಾಸಕ ಸಿ. ರಮೇಶ್ ಮಾತನಾಡಿ, ೧೫ ರಿಂದ ೨೦ ವರ್ಷಗಳ ಇತಿಹಾಸದಲ್ಲಿ ಇಂತಹ ಸಭೆ ನಡೆಯುತ್ತಿರುವುದು ಇದೇ ಮೊದಲು. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಪರಿಶ್ರಮ ತುಂಬಾ ಇದೆ. ಅವರು ಜಿಲ್ಲೆಯ ಎಲ್ಲ ತಾಲೂಕುಗಳಿಗೂ ಭೇಟಿ ಕೊಡುತ್ತಿದ್ದಾರೆ. ಪಕ್ಷದ ಸಂಘಟನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿದರು.
ನಮ್ಮ ಕಾರ್ಯಕರ್ತರಿಗೆ ಸರ್ಕಾರದ ವತಿಯಿಂದ ಏನೆಲ್ಲ ಸೌಕರ್ಯ ಮಾಡಬಹುದೋ ಅದನ್ನು ನಾವುಗಳು ಈಡೇರಿಸಿಕೊಡುತ್ತೇವೆ. ನನಗೆ ಎಲ್ಲ ಪಂಚಾಯಿತಿಗಳಲ್ಲೂ ಸಭೆ ಮಾಡಬೇಕೆಂಬುದಿತ್ತು.ಆದರೆ, ಸಮಯದ ಅಭಾವ ಹಾಗೂ ಕೊರೋನಾ ಭೀತಿ ಹಿನ್ನೆಲೆ ಈ ರೀತಿಯಾಗಿ ಎರಡು ಮೂರು ಪಂಚಾಯಿತಿಗಳನ್ನು ಸೇರಿಸಿ ಪಕ್ಷದ ಸಭೆ ನಡೆಸುತ್ತಿದ್ದೇನೆ ಎಂದರು.
ಟಿ.ನರಸೀಪುರ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಕೆ.ಸಿ.ಲೋಕೇಶ್, ಮಾಜಿ ಶಾಸಕ ಭಾರತಿ ಶಂಕರ್, ಮೂಗೂರು ಕ್ಷೇತ್ರ ತಾಪಂ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಇತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!