ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವ 20 ಲಕ್ಷ ಕೋಟಿ ಪ್ಯಾಕೇಜ್ ರೈತರಿಗೆ ಮತ್ತು ಕಾರ್ಮಿಕ ವಲಯಕ್ಕೆ ಹೆಚ್ಚು ಬಳಕೆ ಆಗಬೇಕು. ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ವೈರಸ್ ಕೃಷಿ ಮತ್ತು ಆಹಾರ ಉತ್ಪನ್ನಗಳ ಅವಶ್ಯಕತೆ ಎಷ್ಟು ಎಂಬುದನ್ನು ತಿಳಿಸಿದೆ. ಹಾಗಾಗಿ ಕೃಷಿಕರಿಗೆ ಶೂನ್ಯ ಬಡ್ಡಿದರಲ್ಲಿ ಹೊಸ ಸಾಲ ನೀಡಬೇಕು. ಕೃಷಿ ಹಾಗೂ ಕೃಷಿ ಕಾರ್ಮಿಕರು ಹಾಗೂ ಗುಡಿ ಕೈಗಾರಿಕೆ ಕೆಂದ್ರ ಸರ್ಕಾರ ಉತ್ತೇಜ ನೀಡಬೇಕು ಎಂದರು.
ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಲು ಸರ್ಕಾರ ಮುಂದಾಗಿರುವುದು ಸರಿಯಲ್ಲ. ರೈತರಿಗೆ ಈ ಕಾಯ್ದೆ ಮಾರಕವಾಗಲಿದೆ. ಈ ಕಾಯ್ದೆ ಜಾರಿಯಿಂದ ದಳ್ಳಾಳಿಗಳ ಹಾವಳಿ ತಪುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಇದು ಕಾರ್ಪೊರೇಟ್ಸೆಕ್ಟರ್ ಗಳ ಹುನ್ನಾರ. ಈ ಕಾಯ್ದೆ ತಿದ್ದುಪಡಿ ರೈತಾಪಿ ವರ್ಗಕ್ಕೆ ಮಾರಕವಾಗಲಿದ್ದು, ರೈತರಿಗೆ ಅನಾನುಕೂಲಗಳೇ ಹೆಚ್ಚು.
ರಾಜ್ಯ ಸರ್ಕಾರ ಶಾಸನ ಸಭೆಯಲ್ಲಿ ಇದರ ಬಗ್ಗೆ ಚರ್ಚೆ ಮಾಡಬೇಕು. ರೈತ ಮುಖಂಡರು ಹಾಗೂ ವಿರೋಧ ಪಕ್ಷಗಳೊಡನೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚರ್ಚೆ ಮಾಡಬೇಕು ಎಂದು ಒತ್ತಾಯಿಸಿದರು.