Tuesday, July 5, 2022

Latest Posts

ಚಂದನವನದ ನಟ ಚಿರಂಜೀವಿ ಸರ್ಜಾ ನಿಧನ: ಮುಖ್ಯಮಂತ್ರಿ ಸಹಿತ ರಾಜಕೀಯ ಗಣ್ಯರುಗಳ ಸಂತಾಪ

ಬೆಂಗಳೂರು: ಚಂದನವನದ ಯುವ ನಟ ಚಿರಂಜೀವಿ ಸರ್ಜಾ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಜನಪ್ರಿಯ, ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿರುವ ಚಿರಂಜೀವಿ ಸರ್ಜಾ, ಉಜ್ವಲ ಭವಿಷ್ಯವನ್ನು ಹೊಂದಿದ್ದ ಕಲಾವಿದ. ಅವರ ನಿಧನದಿಂದ ಕನ್ನಡ ಚಲನಚಿತ್ರ ರಂಗ ಓರ್ವ ಉತ್ತಮ ನಟನನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ನಟ ಚಿರಂಜೀವಿ ಸರ್ಜಾ ಅವರ ಸಾವಿನ ಸುದ್ದಿ ನೋವುಂಟುಮಾಡಿದೆ. ಇನ್ನಷ್ಟು ಕಾಲ ನಮ್ಮ ನಡುವೆ ಈ ಹುಡುಗ ಇರಬೇಕಿತ್ತು. ಅವರ ದುಃಖತಪ್ತ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಭಿಮಾನಿಗಳಿಗೆ ಹಾಗೂ ಬಂಧು ಮಿತ್ರರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss