Thursday, August 18, 2022

Latest Posts

ಚಂದನ್ ಶೆಟ್ಟಿ ವಿರುದ್ಧ ದೂರು ದಾಖಲು, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು

ಕನ್ನಡ ಚಂದನ್ ಶೆಟ್ಟಿ ಅವರು ಕೋಲುಮಂಡೆ ಹಾಡಿನಲ್ಲಿ ಹಿಂದೂಗಳ ‘ಧಾರ್ಮಿಕ ಭಾವನೆಗೆ ‘ಕ್ಕೆ ಉಂಟು ಮಾಡಿದ್ದಾರೆ ಎಂದು ಮಹದೇಶ್ವರನ ‘ಕ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಚಂದನ್ ಶೆಟ್ಟಿ ವಿರುದ್ಧ ದೂರು ಸಹ ದಾಖಲಾಗಿದೆ.   ಚಂದನ್ ಶೆಟ್ಟಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ತೇಜಸ್ ಎಂಬುವರು ದೂರು ನೀಡಿದ್ದಾರೆ. ಗಾಯಕನ ವಿರುದ್ಧ ಎನ್‌ಸಿಆರ್ ದಾಖಲು ಮಾಡಿರುವ ಪೊಲೀಸರು, ಪ್ರಕರಣ ಸಂಬಂ‘ ವಿವರಣೆ ನಡೆಸುತ್ತಿದ್ದಾರೆ.

ಚಂದನ್ ಶೆಟ್ಟಿ ’ಕೋಲುಮಂಡೆ ಜಂಗಮದೇವ ಎಂಬ ಜಾನಪದ ಹಾಡನ್ನು ತನ್ನ ಲಾ‘ಕ್ಕಾಗಿ ಬಳಸಿಕೊಂಡಿದ್ದಾರೆ, ಇತಿಹಾಸ ತಿರುಚಿ ಚಿತ್ರಿಕರಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಹಾಡಿನಲ್ಲಿ ಶರಣೆ ಸಂಕಮ್ಮ ಅವರನ್ನು ಅಶ್ಲೀಲವಾಗಿ ಪ್ರದರ್ಶಿಸಲಾಗಿದೆ. ಆ ಮೂಲಕ ಶರಣೆ ಸಂಕಮ್ಮರನ್ನು ಅವಮಾನಿಸಲಾಗಿದೆ’ ಎಂದು ಚಂದನ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಚಂದನ್ ಶೆಟ್ಟಿ ಹಾಡಿರುವ ಕೋಲುಮಂಡೆ ಹಾಡನ್ನು ಯೂಟ್ಯೂಬ್ ಸೇರಿದಂತೆ ಎಲ್ಲ ಕಡೆಯೂ ತೆಗೆಯಬೇಕು. ಇಲ್ಲವಾದಲ್ಲಿ ಚಂದನ್ ಮನೆ ಮುಂದೆ ‘ರಣಿ ಮಾಡಬೇಕಾಗುತ್ತದೆ. ರಾಜ್ಯದಲ್ಲಿ ಅವರ ಕಾರ್ಯಕ್ರಮ ಬಹಿಷ್ಕರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ವಿವಾದ ದೊಡ್ಡದಾಗುತ್ತಿದ್ದಂತೆ ಚಂದನ್ ಶೆಟ್ಟಿ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ಹಾಡನ್ನು ಆನಂದ್ ಆಡಿಯೋ ಯೂಟ್ಯೂಬ್ ನಿಂದ ಡಿಲೀಟ್ ಮಾಡಲಾಗಿದೆ. ಆದರೆ ಇವತ್ತು ಚಂದನ್ ವಿರುದ್ಧ ಹಿಂದೂ ಸಂಘಟನೆ ಕಾರ್ಯಕರ್ತರೊಬ್ಬರು ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!