ಕನ್ನಡ ರ್ಯಾಂಪರ್ ಚಂದನ್ಶೆಟ್ಟಿ ಇತ್ತೀಚಿಗೆ ಗೌರಿ -ಗಣೇಶ್ ಹಬ್ಬದ ಪ್ರಯುಕ್ತ ಕೋಲುಮಂಡೆ ಜಂಗಮದೇವ ಎಂಬ ಹೊಸ ಹಾಡನ್ನು ಬಿಡುಗಡೆಗೊಳಿಸಿದ್ದರು. ಈ ಹಾಡಿಗೆ ಯ್ಯೂಟೂಬ್ನಲ್ಲಿ ಸಿಕ್ಕಾಪಟ್ಟೆ ರೆಸ್ಪಾನ್ಸ್ ಸಿಕ್ಕಿತ್ತು. ಇದನ್ನು ಕಂಡು
ಯುವಕರು ಫುಲ್ ಫಿದಾ ಆಗಿದ್ದಾರೆ. ಸಂಗೀತ ಪ್ರಿಯರ ಮನಗೆದ್ದ ಚಂದನ್ ಶೆಟ್ಟಿಯ ಕೋಲುಮಂಡೆ ಜಂಗಮದೇವ ಹಾಡು ಈಗ ವಿವಾದವನ್ನು ಸೃಷ್ಟಿಸಿದೆ. ಕೋಲುಮಂಡೆ ಹಾಡನ್ನು ಅಶ್ಲೀಲವಾಗಿ ಚಿತ್ರೀಕರಿಸಿ ಜನರ ಧಾರ್ಮಿಕ ಭಾವನೆಗೆ ‘ಕ್ಕೆ ತಂದಿದ್ದಾರೆ ಎಂದು ಚಾಮರಾಜನಗರ ಜನರು ವಿರೋ‘ ವ್ಯಕ್ತಪಡಿಸುತ್ತಿದ್ದಾರೆ. ಕೋಲುಮಂಡೆ ಜಂಗಮದೇವ ಎಂಬ ಜಾನಪದ ಹಾಡನ್ನು ತನ್ನ ಲಾ‘ಕ್ಕಾಗಿ ಬಳಸಿಕೊಂಡಿರುವ ಚಂದನ್ ಶೆಟ್ಟಿ ಇತಿಹಾಸ ತಿರುಚಿ ಹಾಡು ಚಿತ್ರಿಕರಿಸಿದ್ದಾರೆ. ಈ ಹಾಡಿನಲ್ಲಿ ಶರಣೆ ಸಂಕಮ್ಮ ಅವರನ್ನು ಅಶ್ಲೀಲವಾಗಿ ಪ್ರದರ್ಶಿಸಲಾಗಿದೆ. ಆ ಮೂಲಕ ಶರಣೆ ಸಂಕಮ್ಮರನ್ನು ಅವಮಾನಿಸಲಾಗಿದೆ’ ಎಂದು ಟೀಕೆ ವ್ಯಕ್ತವಾಗಿದೆ.
ಚಂದನ್ ಶೆಟ್ಟಿ ಹಾಡಿರುವ ಕೋಲುಮಂಡೆ ಹಾಡನ್ನು ಯೂಟ್ಯೂಬ್ನಿಂದ ತೆಗೆಯಬೇಕು. ಇಲ್ಲವಾದಲ್ಲಿ ಚಂದನ್ ಮನೆ ಮುಂದೆ ‘ರಣಿ ಮಾಡಬೇಕಾಗುತ್ತದೆ. ರಾಜ್ಯದಲ್ಲಿ ಅವರ ಕಾರ್ಯಕ್ರಮ ಬಹಿಷ್ಕರಿಸಬೇಕಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚಂದನ್ ಶೆಟ್ಟಿ ವಿರುದ್ಧ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕೋಲುಮಂಡೆ ಹಾಡಿಗೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆ ಗಾಯಕ ಚಂದನ್ ಶೆಟ್ಟಿ ಸಾರ್ವಜನಿಕರಿಗೆ ಕ್ಷಮೆ ಕೇಳಿದ್ದಾರೆ. ಜಾನಪದ ಕಲಾವಿದರು ಯಾರೂ ತಪ್ಪು ತಿಳಿಯಬೇಡಿ ಎಂದು ಮನವಿ ಮಾಡಿರುವ ಚಂದನ್ ಶೆಟ್ಟಿ ಟಿವಿ ಮಾ ಧ್ಯಮಕ್ಕೆ ಪ್ರತಿಕ್ರಿಯಿಸಿ ಕ್ಷಮೆಯಾಚಿಸಿದ್ದಾರೆ.