ಹೊಸದಿಗಂತ ಆನ್ಲೈನ್ ಡೆಸ್ಕ್:
ರಾಣಿಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಚತುಷ್ಪಥ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.
ಡಾಬಾ ಬಳಿ ಟ್ರಾಕ್ಟರ್ ಕಾರಿಗೆ ಗುದ್ದಿದ್ದು, ಮಹಿಳೆ ಮೃತಪಟ್ಟಿದ್ದಾರೆ.
ಚಿತ್ರದುರ್ಗದ ಗಂಗಮ್ಮ ಕೋಂ.ಗುರಪ್ಪ ಮೃತರು.
ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ದಾರವಾಡದಿಂದ ಮೊಳಕಾಲ್ಮೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.