Thursday, July 7, 2022

Latest Posts

ಚಲಿಸುತ್ತಿದ್ದ ಕಾರ್ ಮೇಲೆ ಬಿತ್ತು ಬೃಹತ್ ಆಲದ ಮರದ ಕೊಂಬೆ

ಹೊಸ ದಿಗಂತ ವರದಿ, ಚಿಕ್ಕಬಳ್ಳಾಪುರ:

ಚಲಿಸುತ್ತಿದ್ದ ಕಾರಿನ ಮೇಲೆ ಆಲದ ಮರದ ಕೊಂಬೆ ಮುರಿದು ಬಿದ್ದು ಕಾರು ಜಖಂ ಆದ ಘಟನೆ ನಗರದ ಬಿ.ಬಿ ರಸ್ತೆಯಲ್ಲಿ ನಡೆದಿದೆ.
ಬಾಲಾಜಿ ಚಿತ್ರಮಂದಿರದ ಬಳಿ ಸ್ವಿಫ್ಟ್ ಡಿಜೈರ್ ಕಾರಿನ ಮೇಲೆ ಆಲದ ಮರದ ಕೊಂಬೆ ಮುರಿದುಬಿದ್ದಿದೆ. ಕಾರು ಚಂದ್ರಶೇಖರಯ್ಯ ಅವರಿಗೆ ಸೇರಿದ್ದು ಎನ್ನಲಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಟ್ರಾಫಿಕ್ ಕ್ಲಿಯರ್ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ನಂತರ ಆಗಮಿಸಿದ ನಗರಸಭಾ ಅಧ್ಯಕ್ಷ ಆನಂದ್ ರೆಡ್ಡಿ, ನಗರಸಭೆ ಅಧಿಕಾರಿಗಳು ಸಿಬ್ಬಂದಿಗಳ ಮೂಲಕ ಕೊಂಬೆ ತೆರವು ಮಾಡಿಸಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಸಂಭವಿಸಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss