Sunday, August 14, 2022

Latest Posts

ಚಾಮರಾಜನಗರ ಜಿಲ್ಲೆಯಲ್ಲಿ ಭಾನುವಾರ 37 ಮಂದಿಗೆ ಕೋರೊನಾ ಪಾಸಿಟಿವ್, 35 ಮಂದಿ ಬಿಡುಗಡೆ, ಓರ್ವ ಸಾವು

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 37 ಮಂದಿಗೆ ಕೋರೊನಾ ಪಾಸಿಟಿವ್ ಪತ್ತೆಯಾಗಿದ್ದು, ಯಳಂದೂರು ತಾಲೂಕಿನ ಗುಂಬಳ್ಳಿಯ 55 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಕೋರೊನಾ ಪಾಸಿಟಿವ್ ಕಾಣಿಸಿಕೊಂಡು ಚಿಕಿತ್ಸೆ ಪಡೆದು ಇಂದು35 ಮಂದಿ ಬಿಡುಗಡೆಯಾಗಿದ್ದರೆ, 37 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಜಿಲ್ಲೆಯ ವ್ಯಾಪ್ತಿಯ ಕೋವಿಡ್ ಸೋಂಕಿತರ ಪ್ರಮಾಣ ಚಾಮರಾಜನಗರ ಮತ್ತು ಗುಂಡ್ಲುಪೇಟೆ ತಾಲೂಕಿನಲ್ಲಿ ಹೆಚ್ಚಳವಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 745ಕ್ಕೆ ಏರಿಕೆಯಾಗಿದೆ. 239 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಇಂದು 35 ಮಂದಿ ಗುಣಮುಖರಾಗಿ ಅಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 745 ಪಾಸಿಟಿವ್ ಪ್ರಕರಣಗಳಿದ್ದರೆ, 496 ಮಂದಿ ಗುಣಮುಖರಾಗಿ ಅಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ 55 ವರ್ಷದ ಮಹಿಳೆ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಕೋವಿಡ್ ಸಂಬಂಧ 9 ಮಂದಿ ಮೃತಪಟ್ಟಿದ್ದಾರೆ. ಕೋವಿಡ್ ಮಾರ್ಗಸೂಚಿ ಪ್ರಕಾರ ಅಂತ್ಯ ಸಂಸ್ಕಾರ ಮಾಡಲಾಗಿದೆ. ಇನ್ನು ಆರು ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಇಂದು ಕಾಣಿಸಿಕೊಂಡಿರುವ 37 ಪ್ರಕರಣಗಳ ಪೈಕಿ ಚಾಮರಾಜನಗರ ತಾಲೂಕಿನಲ್ಲಿ 15, ಗುಂಡ್ಲುಪೇಟೆ ತಾಲೂಕಿನಲ್ಲಿ 9, ಕೊಳ್ಳೇಗಾಲ ತಾಲೂಕಿನಲ್ಲಿ 8, ಯಳಂದೂರು ತಾಲೂಕಿನಲ್ಲಿ 02, ಹಾಗೂ ಹನೂರು ತಾಲೂಕಿನಲ್ಲಿ 3 ಪ್ರಕರಣ ವರದಿಯಾಗಿದೆ. ಇವೆಲ್ಲರು ಸಹ ನಗರದ ಕೋವಿಡ್ ಜಿಲ್ಲಾ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss