ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 39 ಮಂದಿಗೆ ಕೋರೊನಾ ಪಾಸಿಟಿವ್ ಪತ್ತೆಯಾಗಿದ್ದು, ಒಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ. ಚಾಮರಾಜನಗರದ ಅಹಮದ್ ನಗರದ ನಿವಾಸಿ 60 ವರ್ಷದ ಮಹಿಳೆ ಹಾಗು ಹನೂರು ತಾಲೂಕಿನ ಕೌದಹಳ್ಳಿ ಗ್ರಾಮದ 55 ವರ್ಷದ ಮಹಿಳೆಗೆ ಸೋಂಕು ತಗಲಿದ್ದು, ಇತರೇ ಖಾಯಿಲೆಯಿಂದಾಗಿ ಗುಣಮಖರಾಗರು ಸಾಧ್ಯವಾಗದೇ ಇಂದು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಕೋರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದ 46 ಮಂದಿ ಚಿಕಿತ್ಸೆ ಪಡೆದು ಇಂದು ಬಿಡುಗಡೆಯಾಗಿದ್ದರೆ, 39 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಜಿಲ್ಲೆಯ ವ್ಯಾಪ್ತಿಯ ಕೋವಿಡ್ ಸೋಂಕಿತರ ಪ್ರಮಾಣ ಕೊಳ್ಳೇಗಾಲ ಮತ್ತು ಗುಂಡ್ಲುಪೇಟೆ ತಾಲೂಕಿನಲ್ಲಿ ಹೆಚ್ಚಳವಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 708ಕ್ಕೆ ಏರಿಕೆಯಾಗಿದೆ. 236 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಇಂದು 46 ಮಂದಿ ಗುಣಮುಖರಾಗಿ ಅಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 708 ಪಾಸಿಟಿವ್ ಪ್ರಕರಣಗಳಿದ್ದರೆ, 463 ಮಂದಿ ಗುಣಮುಖರಾಗಿ ಅಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಚಾ.ನಗರ ಮತ್ತು ಕೌದಹಳ್ಳಿ ಗ್ರಾಮದ ಇಬ್ಬರು ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಕೋವಿಡ್ ಸಂಬಂಧ 9 ಮಂದಿ ಮೃತಪಟ್ಟಿದ್ದಾರೆ. ಕೋವಿಡ್ ಮಾರ್ಗಸೂಚಿ ಪ್ರಕಾರ ಅಂತ್ಯ ಸಂಸ್ಕಾರ ಮಾಡಲಾಗಿದೆ. ಇನ್ನು ಆರು ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಇಂದು ಕಾಣಿಸಿಕೊಂಡಿರುವ 39 ಪ್ರಕರಣಗಳ ಪೈಕಿ ಕೊಳ್ಳೇಗಾಲ ತಾಲೂಕಿನಲ್ಲಿ 13, ಗುಂಡ್ಲುಪೇಟೆ ತಾಲೂಕಿನಲ್ಲಿ 9, ಯಳಂದೂರು ತಾಲೂಕಿನಲ್ಲಿ 07, ಚಾಮರಾಜನಗರ ತಾಲೂಕಿನಲ್ಲಿ 08 ಹಾಗೂ ಹನೂರು ತಾಲೂಕಿನಲ್ಲಿ 2 ಪ್ರಕರಣ ವರದಿಯಾಗಿದೆ. ಇವೆಲ್ಲರು ಸಹ ನಗರದ ಕೋವಿಡ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.