ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಕಂದಕಕ್ಕೆ ಉರುಳಿ ಬಿದ್ದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಣಿವೆಹಳ್ಳಿಯಲ್ಲಿ ನಡೆದಿದೆ.
ಮಾರ್ಗ ಮಧ್ಯೆ ಕಣಿವೆಹಳ್ಳಿ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಪರಿಣಾಮ 16 ಜನರಿಗೆ ಸಣ್ಣ, ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹರಪನಹಳ್ಳಿ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.