Tuesday, December 23, 2025

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪ್ರೈವೇಟ್‌ ಬಸ್‌: ಸ್ಥಳದಲ್ಲೇ ಇಬ್ಬರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ 6 ಜನ ಗಂಭೀರವಾಗಿ ಗಾಯಗೊಂಡ ಘಟನೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ಸಾಗುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.

ಅರ್ನವಿ(11), ಯಶ್(20) ಸ್ಥಳದಲ್ಲೇ ಮೃತಪಟ್ಟಿದ್ದು, 29 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಾರಾಷ್ಟ್ರದ ಸಾಂಗ್ಲಿಯಿಂದ ತಮಿಳುನಾಡು ಕಡೆ ಸಂಚರಿಸುತ್ತಿತ್ತು. ಮೊಟೇಬೆನ್ನೂರು ಗ್ರಾಮದ ಬಳಿ‌ ಬಸ್ ಮುಂದೆ ಕಾರು ಬಂದಿದೆ. ಕಾರಿಗೆ ಗುದ್ದುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕ ಬ್ರೇಕ್ ಹಾಕಿದ್ದಾನೆ. ಇದರಿಂದ ಬಸ್‌ ಪಲ್ಟಿಯಾಗಿದೆ. 

error: Content is protected !!