ಹೊಸ ದಿಗಂತ ಆನ್ಲೈನ್ ಡೆಸ್ಕ್:
ಚಿಕ್ಕಬಳ್ಳಾಪುರಕ್ಕೆ ಭಾನುವಾರ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ನಂತರ ಮುದ್ದೇನಹಳ್ಳಿಗೆ ತೆರಳಿದ ಅವರು, ಅಲ್ಲಿ ಸರ್. ಎಂ. ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ನಂತರ ಚಿಕ್ಕಬಳ್ಳಾಪುರದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.
ಈ ಸಂದರ್ಭ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಸಂಸದೆ ಶೋಭಾ ಕರಂದ್ಲಾಜೆ, ಎಸ್. ಮುನಿಸ್ವಾಮಿ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.